ಶಿವಮೊಗ್ಗ: ವೈಯಕ್ತಿಕ ವಿಚಾರಕ್ಕೆ ಶಿವಮೊಗ್ಗ ನಗರದಲ್ಲಿ ಇಬ್ಬರು ಯುವಕರಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ (stabbing). ಗಂಭೀರ ಗಾಯಗೊಂಡಿರುವ ಯುವಕರನ್ನು ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಬ್ಬೀರ್ ಮತ್ತು ಶಹಬಾಜ್ ಎಂಬುವವರು ಗಾಯಗೊಂಡಿದ್ದಾರೆ. ನಗರದ ಊರುಗಡೂರು ಬಡಾವಣೆಯಲ್ಲಿ ಇಂದು ಘಟನೆ ಸಂಭವಿಸಿದೆ.
ವೈಯಕ್ತಿಕ ಕಾರಣಕ್ಕೆ ಗಲಾಟೆ, ಇರಿತ
ಇನ್ನು, ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ‘ವೈಯಕ್ತಿಕ ವಿಷಯಕ್ಕೆ ಘಟನೆ ಸಂಭವಿಸಿದೆ. ಶಬ್ಬೀರ್‌ನ ಸಹೋದರಿಯ ಗಂಡ ಫಾರ್ದಿನ್, ಆತನ ಸಹೋದರ ಮತ್ತು ಸ್ನೇಹಿತ ಸೇರಿ ಇರಿದಿದ್ದಾರೆ’ ಎಂದು ತಿಳಿಸಿದ್ದಾರೆ.
ಮದುವೆ ವಿಷಯಕ್ಕೆ ಮನಸ್ತಾಪ
‘ಶಬ್ಬೀರ್‌ನ ಸಹೋದರಿ ಮತ್ತು ಫಾರ್ದಿನ್ ಪ್ರೀತಿಸಿ ಕೆಲವು ವರ್ಷದ ಹಿಂದೆ ವಿವಾಹವಾಗಿದ್ದರು. ಇದಕ್ಕೆ ಕುಟುಂಬದವರ ವಿರೋಧವಿತ್ತು. ಈಚೆಗೆ ಶಬ್ಬೀರ್‌ನ ಸಹೋದರಿ ಮತ್ತು ಫಾರ್ದಿನ್ ಪ್ರತ್ಯೇಕವಾಗಿದ್ದರು. ಇದೇ ವಿಚಾರವಾಗಿ ಫಾರ್ದಿನ್‌ಗೆ ಶಬ್ಬೀರ್ ಮತ್ತು ಶಹಬಾಜ್ ಬೆದರಿಸುತ್ತಿದ್ದರು. ಹಾಗಾಗಿ ಘಟನೆ ಸಂಭವಿಸಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್ ಆಗಿದ್ದಾರೆ?
stabbing
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






