ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸೋಗಾನೆ ಬಳಿ ವಿಮಾನ ನಿಲ್ದಾಣಕ್ಕೆ (Airport) ಭೂಮಿ ನೀಡಿದ ಸಂತ್ರಸ್ತರಿಗೆ ನಿವೇಶನ ನೀಡುತ್ತೇವೆ ಎಂದು ಭರವಸೆ ನೀಡಿ, ಅದನ್ನು ಪಾಲಿಸದ ಸರಕಾರ, ಜಿಲ್ಲಾಡಳಿತದ ನಡೆ ಖಂಡಿಸಿ ಅ.9ರಂದು ಬೆಳಗ್ಗೆ 10ರಿಂದ ವಿಮಾನ ನಿಲ್ದಾಣದ ಪ್ರವೇಶದ್ವಾರದಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸೋಗಾನೆ ಭೂಮಿ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ಕೃಷ್ಣಪ್ಪ ತಿಳಿಸಿದರು.
ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2006-07ರಲ್ಲಿ ವಿಮಾನ ನಿಲ್ದಾಣಕ್ಕೆ ನಮ್ಮಿಂದ ಭೂಮಿ ಪಡೆಯಲಾಯಿತು. ಈ ವೇಳೆ ನಮಗೆ ನಿವೇಶನ ನೀಡುವಂತೆ ಸರ್ಕಾರ ಆದೇಶ ಮಾಡಿತ್ತು. ನ್ಯಾಯಾಲಯವೂ ನಮಗೆ ನಿವೇಶನ ನೀಡುವಂತೆ ಸೂಚನೆ ನೀಡಿತ್ತು. ಆದರೆ, ವಿಮಾನ ನಿಲ್ದಾಣದ ಉದ್ಘಾಟನೆ ಸಮಯದಲ್ಲಿ ನೀಡುತ್ತಾರೆ ಎಂಬ ನಮ್ಮ ನಿರೀಕ್ಷೆ ಸುಳ್ಳಾಯಿತು ಎಂದರು.
ಕೆಲವರು ತಡೆಯಾಜ್ಞೆ ತಂದಿದ್ದರು
ನಮಗೆ ನಿವೇಶನ ನೀಡುವಂತೆ ವಿಮಾನ ನಿಲ್ದಾಣ ಉದ್ಘಾಟನೆ ದಿನ ಪ್ರತಿಭಟನೆ ಹಮ್ಮಿಕೊಂಡ ಕಾರಣ ಜಿಲ್ಲಾಡಳಿತ ನಿವೇಶನ ಹಂಚಿಕೆ ಪತ್ರ ನೀಡಿತ್ತು. ಆದರೆ, ಕೆಲವರು ನಿವೇಶನ ಹಂಚದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ನಾವೇ ಹೋರಾಡಿ ಆ ತಡೆಯಾಜ್ಞೆ ತೆರವು ಮಾಡಿಸಿದ್ದೇವೆ ಎಂದರು.
ನಿವೇಶನ ಹಂಚಿಕೆಗೆ ಗಡುವು ನೀಡಿದ್ದ ಕೋರ್ಟ್
ಸಂತ್ರಸ್ತ ರೈತರಿಗೆ ಮೂರು ತಿಂಗಳ ಒಳಗೆ ನಿವೇಶನ ಹಂಚಿಕೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಆದರೂ ಜಿಲ್ಲಾಡಳಿತ ವಿಳಂಬ ಮಾಡುತ್ತಿದೆ. ಈ ಬಗ್ಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಿದ್ದೇವೆ. ಅ.9ರಿಂದ 340 ಸಂತ್ರಸ್ತರು ನ್ಯಾಯ ಸಿಗುವವರೆಗೂ ವಿಮಾನ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಿದೇವೆ.

ಪತ್ರಿಕಾಗೋಷ್ಠಿಯಲ್ಲಿ ಶಿವಕುಮಾರ್, ಮಾಲತೇಶ್, ರಾಮಣ್ಣ, ನಾಗೇಶ್, ವೀರಭದ್ರ, ರಾಘವೇಂದ್ರ, ಚಂದ್ರಾನಾಯ್ಕ ಮತ್ತಿತರರಿದ್ದರು.
ಇದನ್ನೂ ಓದಿ » ಶಿವಮೊಗ್ಗದ ವಿದ್ಯಾನಗರ ಮೇಲ್ಸೇತುವೆ ಸರ್ಕಲ್‌ಗೆ ನಾಮಕರಣ, ನಾಮಫಲಕ ಅನಾವರಣ
shimoga Airport
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















