ಶಿವಮೊಗ್ಗದಲ್ಲಿ ಅಕ್ಬರ್‌ ಕಾಲಿಗೆ ಗುಂಡೇಟು, ಜಿಲ್ಲಾ ರಕ್ಷಣಾಧಿಕಾರಿ ಫಸ್ಟ್‌ ರಿಯಾಕ್ಷನ್‌, ಏನಂದ್ರು ಎಸ್‌ಪಿ?

ಶಿವಮೊಗ್ಗ: ಅಮ್ಜದ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಕ್ಬರ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ (Arrest). ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದರು. (ಈ ಸುದ್ದಿಯನ್ನು ಇನ್ನು 81 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌

point-1ಬಂಧಿತ ಆರೋಪಿ ಅಕ್ಬರ್ ಮೇಲೆ ಈಗಾಗಲೇ ಕೊಲೆ ಯತ್ನ ಮತ್ತು ಸುಲಿಗೆಯಂತಹ ನಾಲ್ಕು ಗಂಭೀರ ಪ್ರಕರಣಗಳು ದಾಖಲಾಗಿವೆ. ಕೆಲ ದಿನಗಳ ಹಿಂದೆ ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಮ್ಜದ್ ಕೊಲೆ ಪ್ರಕರಣದಲ್ಲೂ ಅಕ್ಬರ್ ಆರೋಪಿಯಾಗಿದ್ದ.

point-2ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐದು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಮ್ಮ ಅಧಿಕಾರಿಗಳು ಅಕ್ಬರ್‌ಗಾಗಿ ಸಾಕಷ್ಟು ಹುಡುಕಾಟ ನಡೆಸಿದ್ದರು. ಇಂದು ಖಚಿತ ಮಾಹಿತಿ ಮೇರೆಗೆ ಆತನನ್ನು ಬಂಧಿಸಲು ತೆರಳಿದಾಗ, ನಮ್ಮ ಸಿಬ್ಬಂದಿ ಮೇಲೆ ಆತ ಹಲ್ಲೆಗೆ ಮುಂದಾಗಿದ್ದಾನೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌, ಯಾರದು ರೌಡಿ ಶೀಟರ್‌? ಆಗಿದ್ದೇನು?

point-3ಪರಿಸ್ಥಿತಿ ಕೈಮೀರುತ್ತಿದ್ದಂತೆ, ಪಿಎಸ್ಐ ಮಂಜುನಾಥ್ ಅವರು ಆತ್ಮರಕ್ಷಣೆಗಾಗಿ ರೌಡಿಶೀಟರ್ ಅಕ್ಬರ್‌ನ ಎಡಗಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ. ಈ ಮೂಲಕ ಅಮ್ಜದ್ ಕೊಲೆ ಪ್ರಕರಣದಲ್ಲಿ ಒಟ್ಟು ಆರು ಜನರ ಬಂಧನವಾದಂತಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

point-4ಅಕ್ಬರ್ ಒಬ್ಬ ರೌಡಿಶೀಟರ್ ಆಗಿದ್ದು, ಈತನ ಮೇಲೆ ಗಂಭೀರ ಪ್ರಕರಣಗಳಿವೆ. ಉಳಿದ ಆರೋಪಿಗಳ ಬಂಧನದ ಸಂಬಂಧ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

Akbar arrest
ಆರೋಪಿ ಅಕ್ಬರ್‌ ಕಾಲಿಗೆ ಗುಂಡೇಟು.
Akbar arrest
ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ.
akbar arrest
ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಚಂದ್ರನಾಯ್ಕ್‌

ಇದನ್ನೂ ಓದಿ » ಶಿವಮೊಗ್ಗ ಏರ್‌ಪೋರ್ಟ್‌ ಬಳಿ ಶಾಪಿಂಗ್‌ ಮಾಲ್‌, ಹೊಟೇಲ್‌, KSIIDC ಅಧ್ಯಕ್ಷರು ಏನೆಲ್ಲ ಹೇಳಿದರು? ಇಲ್ಲಿದೆ ಹೈಲೈಟ್ಸ್‌

Arrest

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment