ಹವಾಮಾನ ವರದಿ: ಕಳೆದ 24 ಗಂಟೆಯಲ್ಲಿ ವಿವಿಧೆಡೆ ಸುರಿದ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ತಗ್ಗಿದೆ. ಇನ್ನು, ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (Weather) (ಈ ಸುದ್ದಿಯನ್ನು ಇನ್ನು 39 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತೂ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಕಾರ್ಗಲ್ ಪವರ್ ಚಾನಲ್ ಬಳಿ ನಾಪತ್ತೆಯಾಗಿದ್ದ ವ್ಯಕ್ತಿ, ತಳಕಳಲೆ ಡ್ಯಾಂ ಹಿನ್ನೀರಿನಲ್ಲಿ ಶವವಾಗಿ ಪತ್ತೆ
Shimoga Weather
