ಸಾಲ ಬಾಧೆ, ಸಾಗರದಲ್ಲಿ ವಿಷ ಸೇವಿಸಿದ್ದ ರೈತ, ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸಾಗರ: ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು (Farmer) ಸಾಲದ ಸಂಕಷ್ಟದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಮಪ್ಪ (56) ಎಂದು ಗುರುತಿಸಲಾಗಿದೆ.

ಗಾಮಪ್ಪ, ಅಕ್ಟೋಬರ್ 9 ರಂದು ಸಂಜೆ ವಿಷ ಸೇವಿಸಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ರೈತ ಗಾಮಪ್ಪ ಅವರು ಬ್ಯಾಂಕ್‌ಗಳು ಮತ್ತು ಖಾಸಗಿಯಾಗಿ ಕೈ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

111025-Gamappa-channasheetikoppa.webp

ಇದನ್ನೂ ಓದಿ » ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ, ರಾಜ್ಯದಲ್ಲಿ ಶುರುವಾಗಲಿದೆ ಎರಡು ವಿಶೇಷ ಶಾಲೆ

Leave a Comment