ಶಿವಮೊಗ್ಗ – ಭದ್ರಾವತಿ ರಸ್ತೆ, ಟೀ ಕುಡಿಯಲು ತೆರಳಿದ್ದ ಸೆಕ್ಯೂರಿಟಿಯ ಜೀವ ಕಸಿದ ಕಾರು, ಆಗಿದ್ದೇನು?

ಶಿವಮೊಗ್ಗ: ರಸ್ತೆ ದಾಟುವಾಗ ಕಾರು (Car) ಡಿಕ್ಕಿ ಹೊಡೆದು ಸೆಕ್ಯೂರಿಟಿ ಗಾರ್ಡ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ – ಭದ್ರಾವತಿ ರಸ್ತೆಯ ನಿದಿಗೆ ಬಸ್‌ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.

ಭದ್ರಾವತಿಯ ಜಿಂಕ್‌ಲೈನ್‌ ರಸ್ತೆ ನಿವಾಸಿ ನಂಜುಂಡ.ಬಿ (57) ಮೃತರು. ಇಲ್ಲಿನ ಜೈನ್‌ ಪಬ್ಲಿಕ್‌ ಶಾಲೆಯಲ್ಲಿ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಕರ್ತವ್ಯಕ್ಕೆ ಹಾಜರಾಗಿ ಸ್ವಲ್ಪ ಸಮಯದ ಬಳಿಕ ಟೀ ಕುಡಿಯಲು ನಂಜುಂಡ ತೆರಳಿದ್ದರು.

ನಿದಿಗೆ ಬಸ್‌ ನಿಲ್ದಾಣದ ಕಡೆಗೆ ತೆರಳಲು ರಸ್ತೆ ದಾಟುವಾಗ ಮಲವಗೊಪ್ಪ ಕಡೆಯಿಂದ ಬಂದು ಕಾರು ಡಿಕ್ಕಿ ಹೊಡೆದು ನಂಜುಂಡ ಅವರ ತಲೆಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆ ಹೊತ್ತಿಗಲೆ ಅವರು ಮೃತಪಟ್ಟಿದ್ದರು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Car-Incident-at-nidige-near-jain-public-school

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮತ್ತೆ ಮೈ ಸುಡಲಿದೆ ಬಿಸಿಲು, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

Car Incident

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : October 13, 2025 at 8:32 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಅಕ್ಟೋಬರ್ 13, 2025

Leave a Comment