ಶಿವಮೊಗ್ಗ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ (advocate) ರಾಕೇಶ್ ಕಿಶೋರ್‌ರನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿ ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜಿನ ಎನ್‌ಎಸ್‌ಯುಐ ಘಟಕ ರಾಷ್ಟ್ರಪತಿ ಅವರನ್ನು ಆಗ್ರಹಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾನೂನು ವಿದ್ಯಾರ್ಥಿಗಳು, ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಸಂವಿಧಾನ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ಘಟನೆ ಬೆನ್ನಿಗೆ ವಕೀಲ ಪರಿಷತ್‌ನಿಂದ ಅವರನ್ನು ಅಮಾನತು ಮಾಡಲಾಗಿದೆ. ಆದರೆ ಅವರನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಪ್ರತಭಟನಾಕಾರರು ಆಗ್ರಹಿಸಿದರು.
ರಾಕೇಶ್ ಕಿಶೋರ್ ಸೀನಿಯರ್ ವಕೀಲರಾಗಿ ಆ ಅರ್ಜಿ ನ್ಯಾಯಾಲಯಕ್ಕೆ ಸಲ್ಲಿಸಲು ಬರುವುದಿಲ್ಲ ಅನ್ನುವುದು ಗೊತ್ತಿತ್ತು. ಆದರೂ ಅರ್ಜಿ ಹಾಕಿದ್ದರು. ನ್ಯಾಯಮೂರ್ತಿ ಅವರಿಗೆ ಅವಮಾನ ಮಾಡುವ ಪೂರ್ವಯೋಜಿತ ಕೃತ್ಯ ಇದು. ವಕೀಲ ರಾಕೇಶ್ ಕಿಶೋರ್‌ರನ್ನು ಮುಕ್ತವಾಗಿ ಕೋರ್ಟ್ ಹಾಲ್‌ನಿಂದ ಹೊರ ಹೋಗಲು ಬಿಡಲಾಗಿದೆ. ಆತನ ವಿರುದ್ಧ ಎಫ್ಐಆರ್ ಹಾಕದಿರುವುದು ಖಂಡನೀಯ.
- ಪಾಲಾಕ್ಷಿ, ಮಾಜಿ ಉಪ ಮೇಯರ್
![]()

ಪ್ರತಿಭಟನೆಯಲ್ಲಿ ಎಸ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ ಕುಮಾರ್, ಪ್ರಮುಖರಾದ ಮಧುಸೂದನ್, ರವಿ ಕಾಟಿಕೆರೆ, ಬಾಲಾಜಿ, ಚಂದ್ರೋಜಿರಾವ್, ಆದಿತ್ಯ, ಸುಬಾನ್ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ, ಟೀ ಕುಡಿಯಲು ತೆರಳಿದ್ದ ಸೆಕ್ಯೂರಿಟಿಯ ಜೀವ ಕಸಿದ ಕಾರು, ಆಗಿದ್ದೇನು?
advocate
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





