ನಾಳೆ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ, ಭಾರಿ ಬಂದೋಬಸ್ತ್, ಪೊಲೀಸರಿಂದ ಪಥಸಂಚಲನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 9 ಸೆಪ್ಟೆಂಬರ್ 2019

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.

ಭದ್ರಾವತಿ ನಗರದ ಕನಕ ಮಂಟಪದಿಂದ ರಂಗಪ್ಪ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ಶಿವಾಜಿ ಸರ್ಕಲ್, ಸಿ.ಎನ್. ರಸ್ತೆ ಮೂಲಕ ಬಸ್ ನಿಲ್ದಾಣದವರೆಗೆ ಪಥಸಂಚಲನ ನಡೆಯಿತು.

ಭದ್ರಾವತಿ ಡಿವೈಎಸ್ಪಿ ನೇತೃತ್ವದಲ್ಲಿ ಕೆ.ಎಸ್.ಆರ್.ಪಿ., ಆರ್.ಎ.ಎಪ್., ಡಿ.ಎ.ಆರ್. ಮತ್ತು ಸಿವಿಲ್ ಪೊಲೀಸ್ ಮತ್ತು ಅಧಿಕಾರಿಗಳಿಂದ ಪಥಸಂಚಲನ ನಡೆಸಲಾಯಿತು. ಗಣಪತಿ ವಿಸರ್ಜನಾ ಮೆರವಣಿಗೆಯ ಪ್ರಯುಕ್ತ ಭದ್ರಾವತಿ ನಗರದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿಕೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment