ಶಿಕಾರಿಪುರ: ತಾಲೂಕಿನ ಬಗನಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು (Bee) ದಾಳಿ ನಡೆಸಿವೆ. ಘಟನೆಯಲ್ಲಿ ಒಟ್ಟು 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ಶಾಲೆ ಆರಂಭವಾಗುತ್ತಿದ್ದಂತೆ ಸಮೀಪದ ಮರದಲ್ಲಿ ಗೂಡು ಕಟ್ಟಿರುವ ಹೆಜ್ಜೇನುಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ. ವಿದ್ಯಾರ್ಥಿಗಳು ಮತ್ತು ಓರ್ವ ಮಹಿಳಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೂಡಲೆ ಗ್ರಾಮಸ್ಥರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ತೀವ್ರ ಗಾಯಗೊಂಡಿರುವ 6 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಖಾಸಗಿ ಬಸ್, ಲಾರಿ ಡಿಕ್ಕಿ, ದಂಪತಿ, ಬಸ್ ಚಾಲಕನಿಗೆ ಗಾಯ, ಎಲ್ಲಿ? ಹೇಗಾಯ್ತು ಘಟನೆ?
Bee
ಇದನ್ನೂ ಓದಿ:➤ ತರಲಘಟ್ಟ ಬಳಿ ಅರಣ್ಯ ವಾಚರ್ ಮೇಲೆ ಕರಡಿ ದಾಳಿ