ಶಿವಮೊಗ್ಗ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ (Youth Congress) ಕಾರ್ಯಕರ್ತರು ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. (ಈ ಸುದ್ದಿಯನ್ನು ಇನ್ನು 60 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಆರ್‌ಎಸ್‌ಎಸ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಘೋಷಣೆಗಳನ್ನು ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಸಚಿವರಿಗೆ ಬೆದರಿಕೆ ಒಡ್ಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಶಾಲೆ, ಕಾಲೇಜು, ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಮಾತ್ರವಲ್ಲ ಯಾವುದೆ ಸಂಘ ಸಂಸ್ಥೆಯು ಕಾರ್ಯಕ್ರಮ ನಡೆಸಬೇಕಿದ್ದರೆ ಅನುಮತಿ ಪಡೆಯಬೇಕು. ಕೋಮು ಬೀಜ ಬಿತ್ತುವ ಆರ್‌ಎಸ್‌ಎಸ್ ನಿಷೇಧ ಮಾಡಬೇಕು. ಸಚಿವರಿಗೆ ಬೆದರಿಕೆ ಒಡ್ಡಿದವರ ವಿರುದ್ದ ಕ್ರಮ ಆಗಬೇಕು.
- ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ
![]()
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಪ್ರಮುಖರಾದ ಹೆಚ್.ಸಿ.ಯೋಗೇಶ್, ಜವಳಿ ಹಾಗೂ ಕೈಮಗ್ಗ ನಿಗಮದ ಅಧ್ಯಕ್ಷ ಚೇತನ್ ಗೌಡ, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್, ಮಾಜಿ ಕಾರ್ಪೊರೇಟರ್ ಧೀರಜ್ ಹೊನ್ನವಿಲೆ, ಅಕ್ಬರ್, ಹುಸೇನ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರ್ಷಿತ್, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಬ್ಲಾಕ್ ಅಧ್ಯಕ್ಷ ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್ ಸೇರಿದಂತೆ ಹಲವರು ಇದ್ದರು.




ಇದನ್ನೂ ಓದಿ » ‘ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ, ಡಬಲ್ ಹಣ ಗಳಿಸಿ’, ನಂಬಿದ ಹೊಸನಗರದ ವ್ಯಕ್ತಿ, ಆಮೇಲೆ ಅಗಿದ್ದೇನು?
Youth Congress
