ಶಿವಮೊಗ್ಗ ಜಿಲ್ಲೆಗೆ ಅಲರ್ಟ್‌ ಪ್ರಕಟ, ಇವತ್ತು ಇರುತ್ತಾ ಮಳೆ? ಇಲ್ಲಿದೆ ಹವಾಮಾನ ವರದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ರಾಜ್ಯದ ವಿವಿಧೆಡೆ ಮತ್ತೆ ಮಳೆ ಅಬ್ಬರಿಸುತ್ತಿದೆ. ದೀಪಾವಳಿ ಹಬ್ಬದಂದು ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಉತ್ತರ ಒಳನಾಡು ಮತ್ತು ಕರಾವಳಿ ಭಾಗಕ್ಕೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ (Weather).

ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?

ಶಿವಮೊಗ್ಗ ಜಿಲ್ಲೆಯಲ್ಲಿಯು ಜೋರು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜಿಲ್ಲೆಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಭಾನುವಾರ ರಾತ್ರಿ ಪೂರ್ತಿ ಮಳೆಯಾಗಿದೆ. ಸೋಮವಾರ ಬೆಳಗ್ಗೆಯಿಂದಲೆ ಮೋಡ ಕವಿದ ವಾತಾವರಣ ಇದೆ. ಈಗಾಗಲೆ ಹಲವು ಕಡೆ ಜೋರು ಮಳೆಯಾಗುತ್ತಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

ಇದನ್ನೂ ಓದಿ » ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಶರಾವತಿ ಹಿನ್ನೀರಿನತ್ತ ಪಲ್ಟಿಯಾದ ಕಾರು, ವ್ಯಕ್ತಿ ಸಾವು, ಹೇಗಾಯ್ತು ಘಟನೆ?

Weather

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment