ವಾರಸುದಾರರು ಇಲ್ಲದ ಬ್ಯಾಂಕ್‌ ಠೇವಣಿ ಹಸ್ತಾಂತರಕ್ಕೆ ಶಿವಮೊಗ್ಗದಲ್ಲಿ ವಿಶೇಷ ಶಿಬಿರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕೆನರಾ ಬ್ಯಾಂಕ್‌ಗಳಲ್ಲಿ (Banking) ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ದ ವಾರಸುದಾರರಿಗೆ ಹಸ್ತಾಂತರಿಸಲು ಅ.24 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ.

ಶಿಬಿರದಲ್ಲಿ ಖಾತೆದಾರರು ಅಥವಾ ಕಾನೂನುಬದ್ಧ ವಾರಸುದಾರರು ಬ್ಯಾಂಕಿನಲ್ಲಿ ಸತತ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿ ಹಣ ಮತ್ತು ಕ್ರೈಮ್ ಮಾಡದ ಠೇವಣಿಗಳನ್ನು ಕ್ರೈಮ್ ಮಾಡಬಹುದು. ಬ್ಯಾಂಕಿಂಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿ ಸಲಹೆ ನೀಡಲಿದ್ದಾರೆ. ಸೂಕ್ತ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ ಅಗತ್ಯ ಸಲಹೆ ಪಡೆಯಬಹುದು. ಶಿಬಿರದ ಅವಕಾಶ ಬಳಸಿಕೊಳ್ಳುವಂತೆ ಕೆನರಾ ಲೀಡ್ ಬ್ಯಾಂಕ್‌ ಮ್ಯಾನೇಜರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಭದ್ರಾವತಿಯ ನಿತಿನ್‌ಗೆ ಚಿನ್ನದ ಪದಕ, ವಿಐಎಸ್‌ಎಲ್‌ ಕಾರ್ಮಿಕರು ಹರ್ಷ

Banking

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2025

Leave a Comment