ದೀಪಾವಳಿ: ಶಿವಮೊಗ್ಗ, ತಾಳಗುಪ್ಪದಿಂದ ಮೆಜಸ್ಟಿಕ್‌, ಯಶವಂತಪುರ, ಕಂಟೋನ್ಮೆಂಟ್‌ಗೆ ವಿಶೇಷ ರೈಲುಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರೈಲ್ವೆ ಸುದ್ದಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆ ನಿರ್ವಹಿಸಲು, ನೈಋತ್ಯ ರೈಲ್ವೆಯು ಯಶವಂತಪುರ– ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ (Express Trains) ರೈಲು, ಕೆಎಸ್‌ಆರ್ ಬೆಂಗಳೂರು – ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮಂಟ್ – ಶಿವಮೊಗ್ಗ ಟೌನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈಲುಗಳ ವಿವರಗಳು ಇಲ್ಲಿದೆ

ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ರೈಲು: ಅಕ್ಟೋಬರ್ 24 ರಂದು ರಾತ್ರಿ 10.30ಕ್ಕೆ ಯಶವಂತಪುರದಿಂದ ಹೊರಟು -ಮರುದಿನ ಬೆಳಗ್ಗೆ 4.15ಕ್ಕೆ ತಾಳಗುಪ್ಪ ತಲುಪಲಿದೆ.

ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ರೈಲು: ಅಕ್ಟೋಬರ್ 25 ರಂದು ಬೆಳಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು- ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರೀ ಪೇಯ್ಡ್‌ ಆಟೋ ವ್ಯವಸ್ಥೆ ಶುರು | ಇಲ್ಲಿದೆ ವಿಡಿಯೋ

ರೈಲು ಸಂಖ್ಯೆ 06225 ವಿಶೇಷ ರೈಲು: ಅಕ್ಟೋಬರ್ 22 ರಂದು ಬೆಳಿಗ್ಗೆ 8:05ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು, ಅದೇ ದಿನ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ ರೈಲು ಸಂಖ್ಯೆ 06226 ಅಕ್ಟೋಬರ್ 22ರಂದು ಸಂಜೆ 5:15 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಅದೇ ದಿನ ರಾತ್ರಿ 10:45 ಗಂಟೆಗೆ ಕೆಎಸ್‌ಆರ್ ಬೆಂಗಳೂರು ತಲುಪಲಿದೆ.

ರೈಲು ಸಂಖ್ಯೆ 06215 ವಿಶೇಷ ರೈಲು: ಅಕ್ಟೋಬ‌ರ್ 22ರಂದು ಬೆಳಿಗ್ಗೆ 10:45ಕ್ಕೆ ಬೆಂಗಳೂರು ಕಂಟೋನ್ಮಂಟ್‌ನಿಂದ ಹೊರಟು, ಅದೇ ದಿನ ಸಂಜೆ 6ಕ್ಕೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 06216 ಅಕ್ಟೋಬರ್ 22 ರಂದು ರಾತ್ರಿ 11:55 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಮರುದಿನ ಬೆಳಿಗ್ಗೆ 7 ಗಂಟೆಗೆ ಬೆಂಗಳೂರು ಕಂಟೋನ್ಮಂಟ್ ತಲುಪಲಿದೆ.

ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕೊನೆಗೂ ಶುರುವಾಯ್ತು ಪ್ರೀ ಪೇಯ್ಡ್‌ ಆಟೋ ಕೌಂಟರ್‌, ಹೇಗಿದೆ ವ್ಯವಸ್ಥೆ?

Express Trains

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2025

Leave a Comment