ಶಿವಮೊಗ್ಗ: ವೈಯಕ್ತಿಕ ದ್ವೇಷಕ್ಕೆ ಚಿಕನ್ ಅಂಗಡಿ ಮಾಲೀಕನ ಮೇಲೆ ಪೆಟ್ರೋಲ್ (petrol) ಎರಚಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಲಾಗಿದೆ. ಸೋಮಿನಕೊಪ್ಪ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಚಿಕನ್ ಅಂಗಡಿ ಮಾಲೀಕ ಜೀಶಾನ್ ಕಿವಿ, ಎಡಗೈಗೆ ಬೆಂಕಿಯಿಂದ ಸುಟ್ಟ ಗಾಯವಾಗಿದೆ ಎಂದು ಆರೋಪಿಸಲಾಗಿದೆ. ಚಿಕನ್ ಅಂಗಡಿ ಬಳಿ ಬಂದಿದ್ದ ವಸೀಂ ಎಂಬಾತ ಜೀಶಾನ್‌ಗೆ ಅವಾಚ್ಯವಾಗಿ ನಿಂದಿಸಿದ್ದ. ಬಳಿಕ ಪ್ಲಾಸ್ಟಿಕ್ ಕವರ್‌ನಲ್ಲಿ ತಂದಿದ್ದ ಪೆಟ್ರೋಲ್ ಜೀಶಾನ್ ಮೈ ಮೇಲೆ ಎಸೆದು ಬೆಂಕಿ ಹಚ್ಚಿ ಓಡಿ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ.
ಕೂಡಲೆ ಸ್ಥಳೀಯರು ಜೀಶಾನ್‌ನನ್ನು ರಕ್ಷಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಹಾಪ್‌ಕಾಮ್ಸ್‌ಗೆ 15 ನಿರ್ದೇಶಕರು ಅವಿರೋಧ ಆಯ್ಕೆ, ವಿಜಯ್‌ಕುಮಾರ್ ಹ್ಯಾಟ್ರಿಕ್ ಸಾಧನೆ
petrol
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






