ವಾಹನ ಸವಾರರಿಗೆ ಗುಲಾಬಿ ಹೂವು ನೀಡಿದ ಪೊಲೀಸರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸಾಗರ: ಸಂಚಾರ ನಿಯಮಗಳ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಸಾಗರ ನಗರ ವ್ಯಾಪ್ತಿಯಲ್ಲಿ ಪೊಲೀಸರು ಹೆಲ್ಮೆಟ್ ಧರಿಸಿದ ದ್ವಿಚಕ್ರ ವಾಹನ ಸವಾರರಿಗೆ ಗುಲಾಬಿ (Rose) ಹೂ ನೀಡುವ ಮೂಲಕ ಗೌರವಿಸಿದ್ದಾರೆ.

ಇನ್ನು ಮುಂದೆ ಎಲ್ಲಾ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಈ ನಿಟ್ಟಿನಲ್ಲಿ ಇಲಾಖೆ ಜಾಗೃತಿ ಮೂಡಿಸಲು ಮುಂದಾಗಿದೆ. ಇನ್ನು ಮುಂದೆ ವಾಹನ ಸವಾರರು ಹೆಲ್ಮೆಟ್ ಧರಿಸದೆ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ನಗರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಪುಲ್ಲಯ್ಯ ರಾಥೋಡ್ ತಿಳಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಹೆಲ್ಮೆಟ್ ಧರಿಸದ ಕಾರಣ ಅಪಘಾತವಾದಾಗ ಅನೇಕ ದ್ವಿಚಕ್ರ ವಾಹನ ಸವಾರರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಹೆಲ್ಮೆಟ್ ಧರಿಸಿದ ಕಾರಣ ಹಲವರ ಜೀವ ಉಳಿದಿದೆ. ಈ ಅಂಶ ಮನಗಾಣಬೇಕು ಎಂದು ತಿಳಿಸಿದರು.

Police-distributes-roses-to-bike-riders-wearing-helmets-in-Sagara

ಇದನ್ನೂ ಓದಿ » ಮಾಚೇನಹಳ್ಳಿಯಲ್ಲಿ ಜಾಗೃತಿ ಕಾರ್ಯಾಗಾರ, ಯಾರೆಲ್ಲ ಭಾಗವಹಿಸ್ತಾರೆ?

Leave a Comment