ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಹಾಗೂ ಎನ್‌ಎಸ್‌ಯುಐ ಜಿಲ್ಲಾ ಘಟಕದಿಂದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಜನ್ಮದಿನ (Birthday) ಆಚರಿಸಲಾಯಿತು.
ಎಲ್ಲೆಲ್ಲಿ ಏನೇನು ಕಾರ್ಯಕ್ರಮ ನಡೆಯಿತು?
ನಗರದ ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಚಾಲನೆ ನೀಡಿದರು. ಮಾಜಿ ಸಂಸದ ಆಯನೂರು ಮಂಜುನಾಥ್, ಶಿಮುಲ್ ಅಧ್ಯಕ್ಷ ವಿದ್ಯಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮರಿಯಪ್ಪ, ನಿರ್ದೇಶಕ ಎಂ.ಶ್ರೀಕಾಂತ್, ಪ್ರಮುಖರಾದ ರಮೇಶ್ ಇಕ್ಕೇರಿ, ಚೈತ್ರಾ ಮೋಹನ್, ವೈ.ಹೆಚ್. ನಾಗರಾಜ್, ಶೇಷಾದ್ರಿ, ಆರ್.ಮೋಹನ್, ಶರತ್ ಮರಿಯಪ್ಪ, ವಿನಯ್ ತಾಂಡ್ಲೆ ಮತ್ತಿತರರಿದ್ದರು.
ಎನ್‌ಎಸ್‌ಯುಐ ಜಿಲ್ಲಾ ಘಟಕದಿಂದ ನಗರದ ವಿವಿಧ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಸಿಹಿ ವಿತರಿಸಲಾಯಿತು. ರಾಜ್ಯ ಜವಳಿ ನಿಗಮದ ಅಧ್ಯಕ್ಷ ಕೆ. ಚೇತನ್, ಪ್ರಮುಖರಾದ ಮಧುಸೂದನ್, ಚಿನ್ನಪ್ಪ, ಗೌತಮ್, ವಿಜಯ್, ರವಿ ಕಾಟಿಕೆರೆ, ಆದಿತ್ಯ, ಸುಭಾನ್, ಫರಾಜ್, ಮಯೂರ್, ಪವನ್, ರಿಹಾನ್ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳಿದ್ದರು.

ಇದನ್ನೂ ಓದಿ » KGFಗೆ ತೆರಳಲು ಶಿವಮೊಗ್ಗದಲ್ಲಿ ಬೆಂಗಳೂರು ಬಸ್ ಹತ್ತಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?
Birthday
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





