BREAKING NEWS – ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ

ಶಿವಮೊಗ್ಗ: ಹಾಸ್ಟೆಲ್‌ನ (Hostel) ಟೆರೇಸ್‌ ಮೇಲೆ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಕೋಟೆ ರಸ್ತೆಯ ಸರ್ಕಾರಿ ಬಾಲಕೀಯರ ವಸತಿ ನಿಲಯದಲ್ಲಿ ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. (ಈ ಸುದ್ದಿಯನ್ನು ಇನ್ನು 33 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತಳು. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೆ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.

ಘಟನೆಗೆ ಕಾರಣ ತಿಳಿದು ಬಂದಿಲ್ಲ. ವನಿಷಾ, ಡಿವಿಎಸ್‌ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದರು. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

Kote-Road-Government-Ladies-Hostel-new.

ಇದನ್ನೂ ಓದಿ » ಶಿವಮೊಗ್ಗಕ್ಕೆ ಡಿಜಿ ಐಜಿಪಿ ಭೇಟಿ, ಮಹತ್ವದ ಮೀಟಿಂಗ್‌, ಪೊಲೀಸರಿಗೆ ಖಡಕ್‌ ಸೂಚನೆ

Hostel

Kote-Road-Government-Ladies-Hostel-new.

Leave a Comment