ಶಿವಮೊಗ್ಗದಲ್ಲಿ ನವದುರ್ಗ ಬಸ್‌ ಚಾಲಕನ ಮೇಲೆ ಮನಸೋಯಿಚ್ಛೆ ಹಲ್ಲೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್‌ ಮಾಡಿದ್ದಕ್ಕೆ ನವದುರ್ಗ ಬಸ್‌ ಚಾಲಕನ (BUS DRIVER) ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್‌ ನಿಲ್ದಾಣದ ಸಮೀಪ ಬ್ರೈಟ್‌ ಹೊಟೇಲ್‌ ಎದುರು ಘಟನೆ ನಡೆದಿದೆ.

ನವದುರ್ಗ ಬಸ್‌ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬ್ರೈಟ್‌ ಹೊಟೇಲ್‌ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್‌ ನಿಲ್ಲಿಸಿದ್ದರು. ಆಗ ಬಂದ ಕಾರೊಂದು ಬಸ್ಸಿಗೆ ಅಡ್ಡಲಾಗಿ ನಿಲ್ಲಿಸಲಾಯಿತು ಎಂದು ಆರೋಪಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಕಾರು ತೆಗೆಯುವಂತೆ ಬಸ್‌ ಚಾಲಕ ಹಾರನ್‌ ಮಾಡಿದ್ದಾರೆ. ಕಾರಿನಲ್ಲಿದ್ದ ಮೂರ್ನಾಲ್ಕು ಮಂದಿ ಹೊರಗಿಳಿದು ಬಂದು ರವಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ರವಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ

BUS DRIVER

Leave a Comment