‘ಕುವೆಂಪು ವಿಶ್ವವಿದ್ಯಾಲಯದಲ್ಲಿ ಪಾಸಾದ ವಿದ್ಯಾರ್ಥಿಗಳು ಫೇಲ್‌ʼ, NSUI ಗರಂ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯವು ಡಿಜಿಟಲ್ ರೂಪದಲ್ಲಿ ನಡೆಸಿದ ಮೌಲ್ಯಮಾಪನದಲ್ಲಿ ಸಾಕಷ್ಟು ಲೋಪಗಳಿವೆ. ಆದ್ದರಿಂದ ಮರುಮೌಲ್ಯಮಾಪನ (Valuation) ಮಾಡಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ವತಿಯಿಂದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಮನವಿ ಸಲ್ಲಿಸಲಾಯಿತು. (ಈ ಸುದ್ದಿಯನ್ನು ಇನ್ನು 48 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಪ್ರತಿ ಕಾಲೇಜಿನಲ್ಲಿ 50 ರಿಂದ 60 ವಿದ್ಯಾರ್ಥಿಗಳು 0,5,6,7 ಅಂಕಗಳನ್ನು ಪಡೆದು ಅನುತ್ತೀರ್ಣ ಗೊಂಡಿದ್ದಾರೆ ಹಾಗೂ ಉತ್ತೀರ್ಣ ಗೊಂಡ ಸಾಕಷ್ಟು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ. ವಿಶ್ವ ವಿದ್ಯಾಲಯದ ಪರೀಕ್ಷಾಂಗ ವಿಭಾಗವು ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ. ಪರೀಕ್ಷಾ ಶುಲ್ಕ, ಮರುಮೌಲ್ಯ ಮಾಪನ ಎಂದು ವಿದ್ಯಾರ್ಥಿಗಳಿಂದ ವಸೂಲಿ ಮಾಡಿಯು ಸಹ ಫಲಿತಾಂಶದ ಜೊತೆ ಆಟವಾಡುತ್ತಾ ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡುತ್ತಿದೆ ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ವಿವಿಯ ಪರೀಕ್ಷಾಂಗ ಕುಲಸಚಿವರು ಈ ಬಗ್ಗೆ ಗಮನ ಹರಿಸಬೇಕು. ಡಿಜಿಟಲ್ ಮೌಲ್ಯಮಾಪನದಲ್ಲಿ ಆಗಿರುವ ಗೊಂದಲಗಳನ್ನು ಬಗೆಹರಿಸಬೇಕು. ವ್ಯವಸ್ಥಿತ ಪೂರ್ವ ಸಿದ್ದತೆಯಿಲ್ಲದೇ ಡಿಜಿಟಲ್ ಮೌಲ್ಯ ಮಾಪನ ನಡೆಸಲು ಕಾರಣರಾದವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಗಿದೆ. ಎನ್‌ಎಸ್‌ಯುಐ ಕಾರ್ಯಾಧ್ಯಕ್ಷ ರವಿ ಕಟಿಕೆರೆ, ಉಪಾಧ್ಯಕ್ಷರಾದ ಆದಿತ್ಯ, ಸುಬಾನ್, ಫರಾಜ್ ಇದ್ದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

NSUI-memorandum-about-Re-valuation

ಇದನ್ನೂ ಓದಿ » ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ

Valuation

NSUI-memorandum-about-Re-valuation

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment