ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆಯಲ್ಲಿನ ಚಿನ್ನ, ಬೆಳ್ಳಿ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಕಳವು ಮಾಡುವುದು ಸಾಮಾನ್ಯ. ಆದರೆ, ನಗರದ ಅಲ್ ಹರೀಮ್ ಲೇಔಟ್‌ನ ಮನೆಯೊಂದರಲ್ಲಿ ಲಕ್ಷಗಟ್ಟಲೆ ಮೌಲ್ಯದ ಶೂಗಳು (Shoes) ಹಾಗೂ ಚಪ್ಪಲಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ನಗರದ ಅಲ್ ಹರೀಮ್ ಲೇಔಟ್‌ನ ಸಂಜಯ್ ಕಶ್ಯಪ್ ಅವರ ಮನೆಯ ಸ್ಲಿಪ್ಪರ್ ಸ್ಟ್ಯಾಂಡ್‌ನಲ್ಲಿ ಇಟ್ಟಿದ್ದ ದುಬಾರಿ ಬೆಲೆಯ ಬ್ರಾಂಡ್‌ಗಳ ಶೂ ಹಾಗೂ ಚಪ್ಪಲಿಗಳನ್ನು ಕಳವು ಮಾಡಲಾಗಿದೆ. ₹16 ಸಾವಿರ ನೈಕಿ ಶೂ, ₹12 ಸಾವಿರದ ಫಿಲಾ ಬ್ಲ್ಯಾಕ್ ಹೈ ಶೂ, ಪೂಮಾ, ಅಡಿಡಾಸ್, ವುಡ್ ಲ್ಯಾಂಡ್ ಸೇರಿ ವಿವಿಧ ಬ್ರಾಂಡೆಂಡ್ ಶೂ ಮತ್ತು ಚಪ್ಪಲಿಗಳನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಒಟ್ಟು ₹1.34 ಲಕ್ಷ ಮೌಲ್ಯದ ಶೂ, ಚಪ್ಪಲಿಗಳು ಕಳುವಾಗಿವೆ ಎಂದು ಅಂದಾಜಿಸಲಾಗಿದೆ. ಜತೆಗೆ ಮನೆಯ ಟೆರೇಸ್ ಮೇಲೆ ಒಣಗಲು ಹಾಕಿದ್ದ ಎರಡು ಜತೆ ಬಟ್ಟೆಗಳು ಸಹ ಕಳವಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » 120 ಇನ್ಸ್‌ಪೆಕ್ಟರ್‌ಗಳು ವರ್ಗ, ಶಿವಮೊಗ್ಗಕ್ಕೆ ರಾಘವೇಂದ್ರ ಕಂಡಿಕೆ ವಾಪಸ್, ಯಾರೆಲ್ಲ ಎಲ್ಲೆಲ್ಲಿಗೆ ವರ್ಗವಾಗಿದ್ದಾರೆ?
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






