ತೀರ್ಥಹಳ್ಳಿ: ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಕ್ಸಾಲುಕೊಪ್ಪ ಮಜರೆ ಗ್ರಾಮದ ಐದು ತಿಂಗಳ ಬಾಣಂತಿ (New Mother) ರಮ್ಯಾ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಮುಂಜಾನೆ ಇವರು ಅಸ್ವಸ್ಥರಾಗಿದ್ದರು. ತಕ್ಷಣ ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಬಾಳೆಹೊನ್ನೂರಿನವರಾದ ರಮ್ಯಾ ನಾಲ್ಕು ವರ್ಷಗಳ ಹಿಂದೆ ಅಕ್ಸಾಲುಕೊಪ್ಪದ ಮಣಿಕಂಠ ಎಂಬುವವರ ಜೊತೆ ವಿವಾಹವಾಗಿದ್ದರು. ಮೃತರಿಗೆ ಎರಡೂವರೆ ವರ್ಷದ ಹಾಗೂ ಐದು ತಿಂಗಳ ಗಂಡು ಮಕ್ಕಳಿವೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೋ ರೂಂ ಮುಂಭಾಗ ನಿಲ್ಲಿಸಿದ್ದ ಕಾರು ರಾತ್ರೋರಾತ್ರಿ ಮಾಯ

