ಶಿರಾಳಕೊಪ್ಪ: ಪಟ್ಟಣದ ಪೊಲೀಸರು ಮಟ್ಕಾ ಅಡ್ಡೆ ಮೇಲೆ ದಾಳಿ (Raid) ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಹೆಚ್.ಕೆ.ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶದಲ್ಲಿ ಮಟ್ಕಾ ಬರೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಗುರುವಾರ ರಾತ್ರಿ ದಾಳಿ ನಡೆಸಲಾಗಿದೆ.
ರಿಯಾಜ್ ಮತ್ತು ವೀರಭದ್ರಪ್ಪ ಎಂಬುವರನ್ನು ಸಬ್ ಇನ್ಸ್ಪೆಕ್ಟರ್ ಟಿ.ಬಿ.ಪ್ರಶಾಂತ್ ಕುಮಾರ್ ನೇತೃತ್ವದ ತಂಡ ಬಂಧಿಸಿದೆ. ಬಂಧಿತರಿಂದ ₹5,000 ನಗದು ಹಾಗೂ ಮಟ್ಕಾ ಬರವಣಿಗೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೋ ರೂಂ ಮುಂಭಾಗ ನಿಲ್ಲಿಸಿದ್ದ ಕಾರು ರಾತ್ರೋರಾತ್ರಿ ಮಾಯ





