ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ್ದ ಪತಿಗೆ ಜೈಲು ಶಿಕ್ಷೆ

ಶಿವಮೊಗ್ಗ: ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ್ದಲ್ಲದೆ ಮಗುವಾದ ನಂತರವು ಆಕೆಯನ್ನು ಮನೆಗೆ ಸೇರಿಸದ ಪತಿಗೆ, ಶಿವಮೊಗ್ಗ ನ್ಯಾಯಾಲಯ ಜೈಲು (Jail) ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ 30 ದಿನ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿದ ಆದೇಶಿಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಏನಿದು ಪ್ರಕರಣ?

ಭದ್ರಾವತಿ ಗುಂಡೇರಿ ಕ್ಯಾಂಪ್‌ನ ಹರೀಶ್‌ ಅಕ್ರಮ ಸಂಬಂಧ ಹೊಂದಿದ್ದ. ಅಲ್ಲದೆ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ್ದ. ಮಗು ಆದ ಬಳಿಕ ಪತ್ನಿ ಬಂದಾಗಲು ಹರೀಶ ಮತ್ತು ಆತನ ಕುಟುಂಬದವರು ಮನೆಗೆ ಸೇರಿಸಿರಲಿಲ್ಲ ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಹರೀಶನ ಪತ್ನಿ ಶಿವಮೊಗ್ಗದ ಮಹಿಳಾ ಠಾಣೆಗೆ ದೂರು ನೀಡಿದ್ದರು.

Shivamogga-Court-Balaraja-Urs-Road

ಇದನ್ನೂ ಓದಿ » ವಿಷ ಸೇವಿಸಿ ಐದು ತಿಂಗಳ ಬಾಣಂತಿ ಆತ್ಮಹತ್ಯೆ

ತನಿಖೆ ನಡೆಸಿದ ಆಗಿನ ಪಿಎಸ್‌ಐ ಶರಾವತಿ.ಎಂ ಅವರು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ನ್ಯಾ. ಸಿದ್ದರಾಜು.ಎನ್.‌ಕೆ ಅವರು ಹರೀಶನಿಗೆ ಶಿಕ್ಷೆ ಪ್ರಕಟಿಸಿದ್ದಾರೆ. 1 ವರ್ಷ ಜೈಲು ಶಿಕ್ಷೆ, ₹1000 ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದವರೆ 30 ದಿನ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಕಿರಣ್ ಕುಮಾರ್ ವಾದ ಮಂಡಿಸಿದ್ದರು.

Leave a Comment