BREAKING NEWS – ಶಿವಮೊಗ್ಗದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಕೊಲೆ

ಶಿವಮೊಗ್ಗ: ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ (woman) ಭೀಕರ ಹತ್ಯೆ ಮಾಡಲಾಗಿದೆ. ಶಿವಮೊಗ್ಗ ತಾಲೂಕು ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಗಂಗಮ್ಮ (45) ಕೊಲೆಯಾದ ಮಹಿಳೆ.

ಹಳೆ ದ್ವೇಷದ ಹಿನ್ನೆಲೆ ಗಂಗಮ್ಮ ಅವರ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ನಾಗೇಶ ನಾಯ್ಕ್‌ ಮತ್ತು ಹರೀಶ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗಂಗಮ್ಮ ಅವರ ಮೃತದೇಹವನ್ನು ಮೆಗ್ಗಾನ್‌ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆಯಲ್ಲಿ ಶಿಕ್ಷಕನ ದರೋಡೆ, ರೀಲ್ಸ್‌ಗೆ ಲೈಕ್‌ ಕೊಟ್ಟವನಿಂದಲೇ ಕೃತ್ಯ

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 10, 2025 at 8:20 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 10, 2025

Leave a Comment