ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ (Akka Pade) ರಚಿಸಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ತಂಡಕ್ಕೆ ಎನ್‌ಸಿಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿರಬೇಕು. ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ 2 ಪಾಳಿ ಆಧಾರದಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಗೆ ನ.13ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ, ದೂರವಾಣಿ ಸಂಖ್ಯೆ 08182-295514 ಸಂಪರ್ಕಿಸಬಹುದು.
ಇದನ್ನೂ ಓದಿ » ಬ್ಯಾಂಕಿನ ಮಹಿಳಾ ಸಿಬ್ಬಂದಿಯನ್ನು ಹೊಟೇಲ್‌ಗೆ ಕರೆಯಿಸಿ ಮೈ, ಕೈ ಮುಟ್ಟಿದ ಹಿರಿಯ ಅಧಿಕಾರಿ







