ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಕುಸಿದು ಬಿದ್ದಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು, ಪತ್ತೆಯಾಗದ ವಾರಸುದಾರರು

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ (Hospital) ಹಳೆ ಕಟ್ಟಡದ ಹತ್ತಿರ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದ ಮಹಿಳೆ ಕೊನೆಯುಸಿರೆಳೆದಿದ್ದಾರೆ. ಇವರ ವಾರಸುದಾರರ ಪತ್ತೆಗೆ ದೊಡ್ಡಪೇಟೆ ಠಾಣೆ ಪೊಲೀಸ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಅ.26 ರಂದು ಲಕ್ಷ್ಮೀ (42) ಎಂಬುವವರು ಮೆಗ್ಗಾನ್‌ ಆಸ್ಪತ್ರೆಯ ಹಳೆಯ ಕಟ್ಟಡದ ಬಳಿ ಸುಸ್ತಾಗಿ ಬಿದ್ದಿದ್ದರು. ಸಾರ್ವಜನಿಕರ ನೆರವಿನಿಂದ ಅವರನ್ನು ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನ.3 ರಂದು ಮೃತಪಟ್ಟಿದ್ದಾರೆ. ಇವರ ವಿಳಾಸ, ವಾರಸುದಾರರ ಕುರಿತು ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೃತ ಮಹಿಳೆಯು 5 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದು, ಬಲಗೈನ ಒಳಭಾಗದಲ್ಲಿ ಹೂವಿನ ಹಚ್ಚೆ ಗುರುತ ಇದೆ ಎಂದು ತಿಳಿಸಲಾಗಿದೆ.

Mc-Gann-Hospital-Shimoga

ಈ ಮೃತ ಮಹಿಳೆಯ ವಾರಸುದಾರರು ಪತ್ತೆಯಾದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08182-261414 / 9916882544 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿಯು ಅಲರ್ಟ್‌, ಬಾಂಬ್‌ ಪತ್ತೆ ದಳ, ಶ್ವಾನದಳದಿಂದ ತಪಾಸಣೆ, ಎಲ್ಲೆಲ್ಲಿ ಹೇಗಿದೆ ಕಟ್ಟೆಚ್ಚರ?

Hospital

Leave a Comment