ವಿದೇಶದಿಂದ ಮರಳಿದ್ದ ಯುವಕನಿಗೆ ಹೃದಯಾಘಾತ, ಸಾವು

ರಿಪ್ಪನ್‌ಪೇಟೆ: ವಿದೇಶದಿಂದ ಮರಳಿದ್ದ ಯುವಕನೊಬ್ಬ ಹೃದಯಾಘಾತಕ್ಕೀಡಾಗಿ (Heart Attack) ಸಾವನ್ನಪ್ಪಿದ್ದಾರೆ. ಹೊಸನಗರ ತಾಲೂಕು ರಿಪ್ಪನ್‌ಪೇಟೆಯ ಇಮ್ರಾನ್‌ (36) ಮೃತ ದುರ್ದೈವಿ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಕಳೆದ ಮೂರು ವರ್ಷದಿಂದ ಇಮ್ರಾನ್ ಸೌದಿ ಆರೇಬಿಯಾದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದರು. ಎರಡು ದಿನದ ಹಿಂದೆ ರಿಪ್ಪನ್‌ಪೇಟೆಯ ಮದೀನಾ ಕಾಲೋನಿಯ ಮನೆಗೆ ಬಂದಿದ್ದರು. ಇವತ್ತು ಬೆಳಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೆ ಇಮ್ರಾನ್‌ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Youth-Returned-from-saudi-arabia-scummbed-at-ripponpete Heart Attack

ಶಿವಮೊಗ್ಗದ ಮಾರ್ಗ ಮಧ್ಯೆ ಇಮ್ರಾನ್‌ ಕೊನೆಯುಸಿರೆಳೆದಿದ್ದಾರೆ. ಇಮ್ರಾನ್‌ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಇದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಲರ್ಟ್‌, ರೈಲುಗಳಲ್ಲಿ ಶೋಧ, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

Heart Attack

Leave a Comment