ಶಿವಮೊಗ್ಗದ ಈ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ ಸಂಚಾರ ನಿಷೇಧ

ಶಿವಮೊಗ್ಗ: ಸಂಚಾರ ದಟ್ಟಣೆ ಹಿನ್ನೆಲೆ ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ (Heavy Vehicle) ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಗೋಪಿ ಸರ್ಕಲ್‌ನಿಂದ ಜೆ.ಪಿ.ಎನ್‌ ರಸ್ತೆ, ಜ್ಯೂವೆಲ್‌ ರಾಕ್‌ ಹೊಟೇಲ್‌ ರಸ್ತೆ ಮಾರ್ಗವಾಗಿ ಕುವೆಂಪು ರಸ್ತೆವರೆಗೆ, ಜೈಲ್‌ ರಸ್ತೆಯಿಂದ ಲಕ್ಷ್ಮೀ ಟಾಕೀಸ್‌ವರೆಗೆ ಭಾರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಈ ರಸ್ತೆಗಳು ಕಿರಿದಾಗಿದ್ದು ಭಾರಿ ವಾಹನಗಳ ಓಡಾಟದಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಆದ್ದರಿಂದ ಈ ಮಾರ್ಗದಲ್ಲಿ ಭಾರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Jail-Road-In-shimoga-city

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ರಸ್ತೆ ಗುಂಡಿಗಳನ್ನು ಮುಚ್ಚಲು ಡೆಡ್‌ಲೈನ್‌ ಫಿಕ್ಸ್‌, ಯಾವಾಗ?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment