ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರು ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. (Bangle)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು. ಈಗ ದಹೆಲಿಯ ಅತ್ಯಂತ ಬಿಗಿ ಭದ್ರತಾ ಪ್ರದೇಶವಾದ ಕೆಂಪು ಕೋಟೆ ಸಮೀಪ ಬಾಂಬ್ ಸ್ಪೋಟ ಸಂಭವಿಸಿದೆ. ಉಗ್ರರ ಅಟ್ಟಹಾಸ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ಆದ್ದರಿಂದ ಗೃಹ ಸಚಿವ ಅಮಿತ್ ಷಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಅಮಿತ್ ಷಾಗೆ ಬಳೆ ಪೋಸ್ಟ್
ಗೃಹ ಸಚಿವರ ವೈಫಲ್ಯ ಖಂಡಿಸಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಬಳೆಗಳನ್ನು ಪೋಸ್ಟ್ ಮಾಡಿದರು. ಗೃಹ ಸಚಿವರು ಬಳೆ ತೊಟ್ಟುಕೊಳ್ಳಬೇಕು ಲೇವಡಿ ಮಾಡಿದರು.

‘ರಾಷ್ಟ್ರ ರಕ್ಷಣೆಗೆ ಚಾಣಾಕ್ಷತನ ತೋರಿಸಿʼ
ಬಾಂಬ್ ಸ್ಪೋಟಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರೆ ಕಾರಣ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಮಣಿಪುರ, ಪೆಹಲ್ಗಾಮ್ ಸೇರಿದಂತೆ ವಿವಿಧೆಡೆ ದಾಳಿಗಳಾಗಿವೆ. ದೆಹಲಿಯ ಕೆಂಪು ಕೋಟೆಯ ಬಳಿಯೆ ಸ್ಪೋಟ ಸಂಭವಿಸಿದೆ. ಅಮಿತ್ ಷಾ ಚುನಾವಣೆಗಷ್ಟೆ ಚಾಣಾಕ್ಷತನ ತೋರಿಸುತ್ತಿದ್ದಾರೆ. ದೇಶದ ರಕ್ಷಣೆಗೆ ಚಾಣಾಕ್ಷತನ ತೋರಿಸಲಿ.
- ಚೇತನ್, ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ
![]()
ಪ್ರಮುಖರಾದ ಮಧು ಸೂದನ್, ಎನ್.ರಮೇಶ್, ಯುವ ಕಾಂಗ್ರೆಸ್ ಶಿವಮೊಗ್ಗ ವಿಧಾನಸಭಾ ಅಧ್ಯಕ್ಷ ಚರಣ್ ಜೆ.ಶೆಟ್ಟಿ, ನಗರ ಬ್ಲಾಕ್ ಅಧ್ಯಕ್ಷರಾದ ಗಿರೀಶ್, ಮೊಹಮ್ಮದ್ ಗೌಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್, ರೇಷ್ಮಾ ಸೇರಿ ಹಲವರು ಇದ್ದರು.




ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ವಾಹನಗಳ ಪಾರ್ಕಿಂಗ್ ನಿಷೇಧ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
Bangle
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





