ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಭಾರಿ ವಾಹನ ಸಂಚಾರ ನಿಷೇಧವಿದ್ದರು ಶಿವಮೊಗ್ಗ ಸಿಟಿಯೊಳಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸುಗಳನ್ನು ಸಂಚಾರ ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಟ್ರಾಫಿಕ್ ಪೊಲೀಸರ ಜೊತೆಗೆ ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿ, ಪ್ರಯಾಣಿಕರು ವಾಗ್ವಾದ ನಡೆಸಿದರು.
ಇಂದು ಗೋಪಿ ವೃತ್ತದಲ್ಲಿ ಸಂಚಾರ ಠಾಣೆ ಪೊಲೀಸರು ಕೆಎಸ್ಆರ್ಟಿಸಿ ಬಸ್ಸುಗಳನ್ನು ತಡೆದರು. ನಗರದ ಒಳಗೆ ಭಾರಿ ವಾಹನ ಸಂಚಾರ ನಿಷೇಧವಿದ್ದರು ಬಸ್ಸುಗಳು ನಗರದ ಒಳಗೆ ಸಂಚರಿಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಈ ಸಂದರ್ಭ ವಾಗ್ವಾದ ನಡೆಯಿತು. ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ಪೊಲೀಸರ ಜೊತೆಗೆ ಚರ್ಚೆ ನಡೆಸಿದರು.

ಇನ್ಮುಂದೆ ಬೆಳಗಿನ ಹೊತ್ತು ನಗರದ ಒಳಗೆ ಕೆಎಸ್ಆರ್ಟಿಸಿ ಬಸ್ಸುಗಳು ಸಂಚರಿಸುವಂತಿಲ್ಲ ಎಂದು ಸಂಚಾರ ಪೊಲೀಸರು ಸೂಚಿಸಿದರು. ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳು ಒಪ್ಪಿದ್ದರಿಂದ ಬಸ್ಸುಗಳನ್ನು ಬಿಟ್ಟು ಕಳುಹಿಸಲಾಯಿತು.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವೆಡೆ ನಾಳೆ ಅರ್ಧ ದಿನ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





