ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಆಯನೂರು ಮಂಜುನಾಥ್ ಅವರ 71ನೇ ಜನ್ಮದಿನ ನ.14ರಂದು ವಿಶಿಷ್ಟವಾಗಿ ನಡೆಯಲಿದೆ ಎಂದು ಆಯನೂರು ಮಂಜುನಾಥ್ ಅಭಿಮಾನಿಗಳ ಬಳಗದ ಪರವಾಗಿ ಪಾಲಿಕೆ ಮಾಜಿ ಸದಸ್ಯ ಧೀರರಾಜ್ ಹೊನ್ನವಿಲೆ ತಿಳಿಸಿದರು.
ಮಥುರಾ ಹೊಟೇಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 11 ಗಂಟೆಗೆ ಜ್ಯೂಯಲ್ ರಾಕ್ ಹೊಟೇಲ್ ಸಮೀಪ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ದೇವರಿಗೆ ವಿಶೇಷಪೂಜೆ, ಬೆಳಗ್ಗೆ 11.30ಕ್ಕೆ ಕಾಂಗ್ರೆಸ್ ಕಛೇರಿಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ, ಮಧ್ಯಾಹ್ನ 12.30ಕ್ಕೆ ಶಾರದಾದೇವಿ ಅಂಧರ ವಿಕಾಸ ಕೇಂದ್ರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವೆಡೆ ನಾಳೆ ಅರ್ಧ ದಿನ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
ಮಧ್ಯಾಹ್ನ 1 ಗಂಟೆಗೆ ಮಿಷನ್ ಕಾಂಪೌಂಡ್ನಲ್ಲಿರುವ ಅವರ ಮನೆಯ ಮುಂಭಾಗ ಅಭಿಮಾನಿಗಳಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಅವರನ್ನು ಅಭಿನಂದಿಸುವ ಕಾರ್ಯಕ್ರಮಕ್ಕೆ ಎಲ್ಲಾ ಅಭಿಮಾನಿಗಳು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಲಕ್ಷ್ಮಣಪ್ಪ, ಆಯನೂರು ಸಂತೋಷ್, ಜಿ. ಪದ್ಮನಾಭ್, ಶಿಜು ಪಾಷಾ, ಹಿರಣ್ಣಯ್ಯ, ಎಸ್.ಪಿ. ಪಾಟೀಲ್, ಕೃಷ್ಣ, ಲೋಕೇಶ್, ಭೋಜರಾಜ್, ರಾಘವೇಂದ್ರ ಮತ್ತಿತರರಿದ್ದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






