ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಎಲ್ಲೆಲ್ಲಿದೆ ಅವಕಾಶ?

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. (ಈ ಸುದ್ದಿಯನ್ನು ಇನ್ನು 54 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರು, ಹೊಸನಗರದಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಮತ್ತು 144 ಸಹಾಯಕಿಯರು, ಸಾಗರದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 62 ಸಹಾಯಕಿಯರು, ಶಿಕಾರಿಪುರದಲ್ಲಿ 1 ಅಂಗನವಾಡಿ ಕಾರ್ಯಕರ್ತೆಯರು ಮತ್ತು 23 ಸಹಾಯಕಿಯರು, ಶಿವಮೊಗ್ಗದಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರು, ಸೊರಬದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 42 ಸಹಾಯಕಿಯರು ತೀರ್ಥಹಳ್ಳಿಯಲ್ಲಿ 11 ಅಂಗನವಾಡಿ ಕಾರ್ಯಕರ್ತೆಯರು ಮತ್ತು 69 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.

ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬೇಕು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಹೆಚ್ಚಿನ ಮಾಹಿತಿಗಾಗಿ ಮೇಲಿನ ವೆಬ್‌ಸೈಟ್ ಅಥವಾ ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್‌ ಪೊಲೀಸ್‌

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

SHIMOGA-NEWS-UPDATE

Leave a Comment