ಬಿಹಾರ ಫಲಿತಾಂಶ, ಶಿವಮೊಗ್ಗದಲ್ಲಿ ಯಡಿಯೂರಪ್ಪ, ರಾಘವೇಂದ್ರ ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಬಿಹಾರ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ, ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇತ್ತ ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಫಲಿತಾಂಶ ಮತ್ತು ಗೆಲುವಿನ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಯಡಿಯೂರಪ್ಪ ಏನಂದ್ರು?

ವಿನೋಬನಗರದ ತಮ್ಮ ಮನೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ‘ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆ ಇತ್ತು. ಆದರೆ ಇಷ್ಟು ದೊಡ್ಡ ಮಟ್ಟಿಗೆ ಸ್ಥಾನಗಳನ್ನು ಗಳಿಸುತ್ತೇವೆ ಎಂದು ನಿರೀಕ್ಷಿಸಿರಲಿಲ್ಲ. ಎನ್‌ಡಿಎ 190ಕ್ಕಿಂತಲು ಹೆಚ್ಚು ಸ್ಥಾನ ಗೆಲ್ಲುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಷಾ ಅವರ ನೇತೃತ್ವದ, ನಿತೀಶ್‌ ಕುಮಾರ್‌ ಅವರ ನಾಯತ್ವವನ್ನು ಜನರು ಮಚ್ಚಿದ್ದಾರೆ’ ಎಂದರು.  

‘ಮತಗಳ್ಳತನದಿಂದ ಗೆಲ್ಲುತ್ತಿದ್ದವರಿಗೆ ಸೋಲಾಗಿದೆʼ

ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯಿಸಿ, ‘ಇಡೀ ದೇಶದ ಜನ ಮತ್ತೊಮ್ಮೆ ಎನ್‌ಡಿಎ ಪರಿವಾಗಿ ಆಶೀರ್ವಾದ ಮಾಡುತ್ತಿದ್ದಾರೆ ಎಂಬುದಕ್ಕೆ ಬಿಹಾರದ ಫಲಿತಾಂಶವೇ ಸಾಕ್ಷಿ. ನಿರೀಕ್ಷೆ ಮೀರಿದ ಫಲಿತಾಂಶ ಲಭಿಸಿದೆ. ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯೇ ಸೋಲು, ಗೆಲುವಿನ ಮಧ್ಯೆ ಸಿಲುಕಿದ್ದಾರೆ. ಹಿಂದುಳಿದವರು, ಅಲ್ಪಸಂಖ್ಯಾತರು ಹೆಚ್ಚಿರುವ ಕ್ಷೇತ್ರಗಳಲ್ಲಿಯು ಬಿಜೆಪಿ, ನಿತೀಶ್‌ ಕುಮಾರ್‌ ಮತ್ತು ಎನ್‌ಡಿಎ ಪರವಾಗಿ ಜನ ಒಲವು ತೋರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಗೆ ಬಿಹಾರದ ಜನರು ಬೆಂಬಲ ನೀಡಿದ್ದಾರೆʼ ಎಂದರು.  

ಇದನ್ನೂ ಓದಿ » ಶಿವಮೊಗ್ಗದ ಒಂದು ರೈಲ್ವೆ ನಿಲ್ದಾಣ ಸೇರಿ ರಾಜ್ಯದ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು

‘ಇಷ್ಟು ವರ್ಷ ಕಾಂಗ್ರೆಸ್‌ನವರು ದೇಶದಲ್ಲಿ, ರಾಜ್ಯಗಳಲ್ಲಿ ಅಡಳಿತ ಮಾಡುತ್ತ ಬಂದಿದ್ದು ಮತಗಳ್ಳತನದಿಂದ ಎಂಬುದು ಸಾಬೀತಾಗಿದೆ. ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡಿದಾಗ ಸುಮಾರು 40 ಲಕ್ಷ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಯಿತು. ಕ್ಷೇತ್ರವಾರು ವಿಂಗಡಿಸಿದಾಗ ಪ್ರತಿ ಕ್ಷೇತ್ರಕ್ಕೆ ಎರಡರಿಂದ ಮೂರು ಸಾವಿರ ಮತಗಳಾಗುತ್ತವೆ. ಹೀಗೆ ಮತಗಳ್ಳತನದಿಂದಲೇ ಇವರು ಗೆದ್ದು ಬರುತ್ತಿದ್ದರು ಎಂದೆನಿಸುತ್ತದೆ. ಪಶ್ಚಿಮ ಬಂಗಾಳ ಸೇರಿದಂತೆ ಮುಂದಿನ ಎಲ್ಲ ಚುನಾವಣೆಗಳಲ್ಲಿ ಗೆಲ್ಲುತ್ತೇವೆʼ ಎಂದು ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 14, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment