ಅಡ್ಡಗಟ್ಟಿ ಚಿನ್ನ, ನಗದು ಕಸಿದವನು ಅರೆಸ್ಟ್‌, ರಂಗೋಲೆ ಹಾಕುತ್ತಿದ್ದ ಮಹಿಳೆ ಸರ ಕಿತ್ತುಕೊಂಡವನು ಜೈಲಿಗೆ

ಶಿವಮೊಗ್ಗ: ಎರಡು ಪ್ರತ್ಯೇಕ ಪ್ರಕರಣದಲ್ಲಿ ವಿನೋಬನಗರ ಠಾಣೆ ಪೊಲೀಸರು ಇಬ್ಬರು ಕಳ್ಳರನ್ನು ಅರೆಸ್ಟ್‌ ಮಾಡಿ, ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಪ್ರಕರಣ 1

ನವುಲೆಯ ಶಿವಬಸವ ನಗರ ಕ್ರಾಸ್‌ ಬಳಿ ಅಕ್ಟೋಬರ್‌ 10ರಂದು ಬೆಳಗಿನ ಜಾವ 4 ಗಂಟೆಗೆ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಅಡ್ಡಗಟ್ಟಿದ್ದ. ಉಂಗುರ, ನಗದು ಕಸಿದುಕೊಂಡು ವ್ಯಕ್ತಿಯನ್ನ ತಳ್ಳಿ ಪರಾರಿಯಾಗಿದ್ದ.

ಈ ಪ್ರಕರಣ ಸಂಬಂಧ ಸಚಿನ್‌ ಅಲಿಯಾಸ್‌ ಶ್ಯಾಡೋ (27) ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ₹55,000 ಮೌಲ್ಯದ  7.90 ಗ್ರಾಂ ತೂಕದ ಬಂಗಾರದ ಸರ, ₹55,000 ನಗದು, ಕೃತ್ಯಕ್ಕೆ ಬಳಸಿದ್ದ ಪಲ್ಸರ್ ಬೈಕ್‌ ವಶಕ್ಕೆ ಪಡೆದಿದ್ದಾರೆ.

ಪ್ರಕರಣ 2

ಆಲ್ಕೊಳದ ಮಂಗಳ ಮಂದಿರ ಸಮೀಪ ಬೆಳಗ್ಗೆ ಮನೆ ಮುಂದೆ ರಂಗೋಲೆ ಹಾಕುತ್ತಿದ್ದ ಮಹಿಳೆಯ ಚಿನ್ನದ ಸರ ಕಸಿದುಕೊಂಡು ಕಳ್ಳನೊಬ್ಬ ಪರಾರಿಯಾಗಿದ್ದ.

ಆರೋಪಿ ಭುವನೇಶ್ವರ ಅಲಿಯಾಸ್‌ ಭುವನ (26) ಎಂಬಾತನನ್ನು ಬಂಧಿಸಿದ್ದು, ಆತನಿಂದ ₹1.30 ಲಕ್ಷ ಮೌಲ್ಯದ 13 ಗ್ರಾಂ ತೂಕದ ಬಂಗಾರದ ಸರ, ಗುಂಡುಗಳು, ಕೃತ್ಯಕ್ಕೆ ಬಳಸಿದ್ದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ » ರಿಂಗ್‌ ರಸ್ತೆಯಲ್ಲಿ ಓಡಾಡುವಾಗ ಹುಷಾರ್‌, ಬೈಕಿನಲ್ಲಿ ತೆರಳಿದ್ದ ಯುವಕ, ಯುವತಿಯಿಂದ ಕೇಸ್‌ ದಾಖಲು

ವಿನೋಬನಗರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಡಿ.ಕೆ ಉಸ್ತುವಾರಿಯಲ್ಲಿ ಪಿಎಸ್‌ಐ ತಿರುಮಲೇಶ್‌.ಜಿ, ಸಿಬ್ಬಂದಿ ರಾಜು, ಮನುಶಂಕರ್‌, ಮಲ್ಲಪ್ಪ.ಎಸ್‌.ಜಿ, ಅರುಣ ಕುಮಾರ್‌ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.  

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment