ನಾಳೆ ಶಾಲೆ, ಕಾಲೇಜಿಗೆ ರಜೆ ಇಲ್ಲ, ಅಧಿಸೂಚನೆ ನಿಜವಲ್ಲ, ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಶಿವಮೊಗ್ಗ: ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಲಾಗಿದೆ ಎಂಬ ನಕಲಿ ಆದೇಶವೊಂದು ವೈರಲ್‌ ಆಗಿದೆ. ಹಲವು ಜನಪ್ರತಿನಿಧಿಗಳು, ಶಿಕ್ಷಕರು, ಉಪನ್ಯಾಸಕರು ಈ ನಕಲಿ ಆದೇಶವನ್ನೇ ಅಸಲಿ ಎಂದು ಭಾವಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರಿಂದ ಗೊಂದಲ ಉಂಟಾಗಿತ್ತು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ವಾಸ್ತವ ಏನು?

ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಸರ್ಕಾರ ಸಂತಾಪ ಸೂಚಿಸಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಆದರೆ ಶಾಲೆ, ಕಾಲೇಜುಗಳಿಗೆ ರಜೆ ಎಂಬ ನಕಲಿ ಅಧಿಸೂಚನೆ ಎಲ್ಲೆಡೆ ವೈರಲ್‌ ಆಗುತ್ತಿದೆ. ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿಧನರಾದಾಗ ರಜೆ ಘೋಷಿಸಲಾಗಿತ್ತು. ಆ ಅಧಿಸೂಚನೆಯನ್ನು ಕಿಡಿಗೇಡಿಗಳು ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದು ವೈರಲ್‌ ಆಗಿದ್ದು, ನಿಜಾ ಎಂದೇ ಜನರು ಭಾವಿಸುವಂತಾಗಿದೆ. ಆದರೆ ಶಾಲೆ, ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿಲ್ಲ.  

‌ಇದನ್ನೂ ಓದಿ » ಶಿವಮೊಗ್ಗದ ಮಹಿಳೆಗೆ 10 ದಿನದಲ್ಲಿ ₹11,46,273 ಮೋಸ, ಆಗಿದ್ದೇನು?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment