ಶಿವಮೊಗ್ಗ ಲೈವ್
ತೀರ್ಥಹಳ್ಳಿ: ಶಿವಮೊಗ್ಗ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಸಂಜೆ ಟ್ಯಾಂಕರ್, ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ ವೆಂಕಟೇಶ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡುವಳ್ಳಿ ಗ್ರಾಮದ ಹಿರೇಬೈಲು ವಾಸಿ ವೆಂಕಟೇಶ್, ಮಂಡಗದ್ದೆ ವಲಯಾರಣ್ಯ ವಿಭಾಗದಲ್ಲಿ ಅರಣ್ಯ ಕಾವಲುಗಾರರಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ, ಪ್ರತಿ ತಿಂಗಳು ₹72,000 ಗೌರವ ಧನ
ಇದನ್ನೂ ಓದಿ » ನೇಣು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ
