ಶಿವಮೊಗ್ಗದಲ್ಲಿ ಯದ್ವಾತದ್ವ ಚಲಿಸಿದ ಸಿಟಿ ಬಸ್‌, ನವ ವಿವಾಹಿತ ಸಾವು, ಬೈಕುಗಳು ಜಖಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸಿಟಿ ಬಸ್‌ ಡಿಕ್ಕಿಯಾಗಿ ನವ ವಿವಾಹಿತ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೂರು ದ್ವಿಚಕ್ರ ವಾಹನಗಳು ಜಖಂ ಆಗಿವೆ. ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಇಂದು ರಾತ್ರಿ ಘಟನೆ ಸಂಭವಿಸಿದೆ.

ಶಾಂತಿ ನಗರ ನಿವಾಸಿ ಅಹಮದ್‌ (31) ಮೃತ ದುರ್ದೈವಿ. ಗಾಯಗೊಂಡಿರುವ ಉಳಿದ ಮೂವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೇಗಾಯ್ತು ಘಟನೆ?

ರಾಗಿಗುಡ್ಡ ಕಡೆಯಿಂದ ಬಂದ ಸಿಟಿ ಬಸ್‌ ಮಣ್ಣಿನ ದಿಬ್ಬ ಹಾರಿ ಯದ್ವತದ್ವ ಚಲಿಸಿದೆ. ಮೂರು ದ್ವಿಚಕ್ರ ವಾಹನಗಳು, ನಾಲ್ವರು ವ್ಯಕ್ತಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕುಗಳು ನಜ್ಜುಗುಜ್ಜಾಗಿವೆ. ಪೊಲೀಸ್‌ ಬ್ಯಾರಿಕೇಡ್‌ ತುಂಡಾಗಿದೆ. ಫುಟ್‌ಪಾತ್‌ಗೆ ಅಳವಡಿಸಿದ್ದ ರೇಲಿಂಗ್‌ ಕೂಡ ಹಾನಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್‌ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

city bus incident - ಸಿಟಿ ಬಸ್‌

ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಇನ್ನು, ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿತ್ತು. ಈ ಪೈಕಿ ಶಾಂತಿನಗರ ನಿವಾಸಿ ಅಹಮದ್‌ (31) ಗಂಭೀರ ಗಾಯಗೊಂಡಿದ್ದು ಸರ್ಜಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಉಳಿದ ಮೂರಿಗೆ ಸಣ್ಣಪುಟ್ಟ ಗಾಯವಾಗಿದ್ದು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

city bus incident - ಸಿಟಿ ಬಸ್‌

ಘಟನಾ ಸ್ಥಳದಲ್ಲಿ ಗುಂಪುಗೂಡಿದ ಜನ

ರಸ್ತೆ ಕಾಮಗಾರಿ ಹಿನ್ನೆಲೆ ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಮೇಲೆ ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸದ್ಯ ಪರ್ಯಾಯ ಮಾರ್ಗದಲ್ಲಿ ಬಸ್ಸುಗಳು ಸಂಚರಿಸುತ್ತಿವೆ. ಮೇಲ್ಸೇತುವೆ ಮುಂಭಾಗ ಮಣ್ಣಿನ ಗುಡ್ಡೆ ಹಾಕಲಾಗಿದೆ. ದ್ವಿಚಕ್ರ ವಾಹನಗಳು ಮಾತ್ರ ಈ ಮಾರ್ಗದಲ್ಲಿ ಸಂಚರಿಸುತ್ತಿವೆ. ಹಾಗಿದ್ದೂ ಸಿಟಿ ಬಸ್‌ ಈ ಮಾರ್ಗದಲ್ಲಿ ಬಂದು ಅಪಘಾತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಜನರು ಘಟನಾ ಸ್ಥಳದಲ್ಲಿ ಗುಂಪುಗೂಡಿದ್ದರು. ಕೆಲವು ಬಸ್ಸಿನ ಗಾಜಿಗೆ ಕಲ್ಲು ತೂರಿದ್ದಾರೆ ಎಂದು ತಿಳಿದು ಬಂದಿದೆ.

city bus incident - ಸಿಟಿ ಬಸ್‌

ಆಸ್ಪತ್ರೆ ಮುಂದೆ ಜಮಾಯಿಸಿದ ಜನ

ಮತ್ತೊಂದೆಡೆ ದುರ್ಗಿಗುಡಿಯಲ್ಲಿರುವ ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಮುಂಭಾಗದಲ್ಲಿಯು ಜನ ಜಮಾಯಿಸಿದ್ದರು. ಸಿಟಿ ಬಸ್‌ ಚಾಲಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಹಮದ್‌ ಪಾರ್ಥೀವ ಶರೀರವನ್ನು ಕಂಡು ಕುಟುಂಬದವರು, ಆಪ್ತರು ಕಣ್ಣೀರಾದರು.

city bus incident - ಸಿಟಿ ಬಸ್‌

ಕೋಟೆ, ಜಯನಗರ ಮತ್ತು ಸಂಚಾರ ಠಾಣೆ ಪೊಲೀಸರು ಸ್ಥಳದಲ್ಲಿ ಇದ್ದರು.

city bus incident - ಸಿಟಿ ಬಸ್‌

city bus incident - ಸಿಟಿ ಬಸ್‌

ಇದನ್ನೂ ಓದಿ » ಮೊಬೈಲ್‌ ಸರ್ವಿಸ್‌ ಸೆಂಟರ್‌ ಬೀಗ ಒಡೆದ ಕಳ್ಳರು, ಏನೇನೆಲ್ಲ ಕದ್ದಿದ್ದಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 16, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment