ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 25 ಸೆಪ್ಟೆಂಬರ್ 2019

ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಿಳಾ ದಸರಾ ಕ್ರೀಡಾಕೂಟದಲ್ಲಿ ಮೋದಿ ಮೋದಿ ಎಂದು ಘೋಷಣೆ ಕೂಗಲಾಗಿದೆ. ಇದರಿಂದ ಕ್ರೀಡಾಕೂಟದಲ್ಲಿ ಕೆಲಕಾಲ ಗೊಂದಲ ನಿರ್ಮಣವಾಗಿತ್ತು. ಈ ಬೆಳವಣಿಗೆ ವಿರುದ್ಧ ಕಾಂಗ್ರೆಸ್ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮೋದಿ ಪರವಾಗಿ ಘೋಷಣೆ ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕ್ರೀಡಾಕೂಟದಲ್ಲಿ ಒಂದು ರಾಜಕೀಯ ಪಕ್ಷಕ್ಕೆ ಸೇರಿದ ಮಹಿಳೆಯರಿಗೆ ಮಾನದಂಡಗಳನ್ನು ಮೀರಿ ಅವಕಾಶ ಕಲ್ಪಿಸಲಾಗಿದೆ ಎಂದು ಅಕ್ಷೇಪ ವ್ಯಕ್ತವಾಗಿತ್ತು. ಕಾರ್ಪೊರೇಟರ್’ಗಳು ಮತ್ತು ಮಹಿಳೆಯರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಕೆಲವರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.
ಸಾರ್ವಜನಿಕರ ದುಡ್ಡಲ್ಲಿ ನಡೆಯುತ್ತಿರುವ ದಸರಾ ಉತ್ಸವದಲ್ಲಿ ಮೋದಿ ಪರವಾಗಿ ಘೋಷಣೆ ಕೂಗುವ ಮೂಲಕ ದಸರಾ ಉತ್ಸವವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





