ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಸಾಗರ ರಸ್ತೆಯ ಅಶೋಕ ಗ್ರ್ಯಾಂಡ್ ಲಾಡ್ಜ್‌ನ ಕೊಠಡಿಯಲ್ಲಿ ಮಹಿಳೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಆ ಸಂದರ್ಭ ಕೊಠಡಿಯಲ್ಲಿದ್ದ ಪರಿಚಿತ ವ್ಯಕ್ತಿಗು ಸುಟ್ಟ ಗಾಯಗಳಾಗಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ರೂಮ್‌ನಲ್ಲಿ ಗೀತಾ ಜೊತೆಗೆ ಗಿರೀಶ್
ದಾವಣಗೆರೆಯ ಗಿರೀಶ್ ಎಂಬುವವರ ಹೆಸರಿನಲ್ಲಿ ಅಶೋಕ ಗ್ರ್ಯಾಂಡ್ ಲಾಡ್ಜ್‌ನಲ್ಲಿ ರೂಂ ಬುಕ್ ಆಗಿತ್ತು. ರೂಂ ನಂಬರ್ 211ರಲ್ಲಿ ಗಿರೀಶ್ ಜೊತೆಗೆ ಗೀತಾ (45) ಎಂಬುವವರು ತಂಗಿದ್ದರು. ಕಳೆದ ರಾತ್ರಿ ರೂಂನಲ್ಲಿ ಗೀತಾ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಹೊಟೇಲ್ ಸಿಬ್ಬಂದಿ ಸಮಯ ಪ್ರಜ್ಞೆ
ರೂಮಿನಲ್ಲಿ ಗೀತಾ ಬೆಂಕಿ ಹಚ್ಚಿಕೊಂಡು ಅರಚಾಡಿದಾಗ ಹೊಟೇಲ್ ಸಿಬ್ಬಂದಿ ತಕ್ಷಣ ದೌಡಾಯಿಸಿದ್ದಾರೆ. ಗೀತಾ ಮತ್ತು ಗಿರೀಶ ಅವರನ್ನು ರಕ್ಷಿಸಿದ್ದಾರೆ. ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಶೇ.70ರಷ್ಟು ಸುಟ್ಟ ಗಾಯ
ಗೀತಾಗೆ ಶೇ.70ರಷ್ಟು ಸುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ. ಆಸ್ಪತ್ರೆಯ ಎಂಎಲ್‌ಸಿ ವರದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಎಂದು ಬರೆಯಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಕೂಡಲೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆಂಬುಲೆನ್ಸ್ ಮೂಲಕ ಗೀತಾ ಅವರನ್ನು ವಿಕ್ಟೋರಿಯ ಆಸ್ಪತ್ರೆ ರವಾನಿಸಲಾಗಿದೆ.
‘ಡೆತ್ ನೋಟ್’ನಲ್ಲಿ ಏನಿತ್ತು?
ರೂಂಗೆ ಬರುವ ಮೊದಲೆ ಪೆಟ್ರೋಲ್ ತಂದಿಟ್ಟುಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲದೆ ಘಟನೆ ಬಳಿಕ ಗೀತಾ ಅವರ ವ್ಯಾನಿಟಿ ಬ್ಯಾಗ್‌ನಲ್ಲಿ ಎರಡು ಪುಟದ ‘ಡೆತ್ ನೋಟ್ʼ ಸಿಕ್ಕಿದೆ.
ಯಾರು ಗೀತಾ? ಶಿವಮೊಗ್ಗಕ್ಕೆ ಬಂದಿದ್ದೇಕೆ?
ಗೀತಾ ದಾವಣಗೆರೆ ಜಿಲ್ಲೆಯವರು. ಶಿವಮೊಗ್ಗದ ಕಾಲೇಜು ಒಂದರಲ್ಲಿ ಅವರ ಪುತ್ರಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹಾಸ್ಟೆಲ್‌ನಲ್ಲಿರುವ ಮಗಳನ್ನು ಮಾತನಾಡಿಸಲು ಗೀತಾ ಆಗಮಿಸಿದ್ದರು. ಮಗಳು ಸಿಗದಿದ್ದರಿಂದ ಆಕೆಗೆ ಮೆಸೇಜ್ ಮಾಡಿ, ಬಳಿಕ ಲಾಡ್ಜ್‌ನ ರೂಂಗೆ ಮರಳಿದ್ದರು. ಇನ್ನು, ಗಿರೀಶ್ ಕೂಡ ದಾವಣಗೆರೆ ಮೂಲದವರು. ಇಬ್ಬರು ಪರಿಚಿತರು ಎಂದು ತಿಳಿದು ಬಂದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ » ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನವೆಂಬರ್ 21ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಲಿಸ್ಟ್
ಸದ್ಯ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಗೀತಾಗೆ ಚಿಕಿತ್ಸೆ ಮುಂದುವರೆದಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

About The Editor
ನಿತಿನ್ ಆರ್.ಕೈದೊಟ್ಲು
















