ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ನ.20 ರಂದು ಲಕ್ಷ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಕೊನೆಯ ಕಾರ್ತಿಕ ಅಮಾವಾಸ್ಯೆಯಂದು ಲಕ್ಷ ದೀಪೋತ್ಸವವನ್ನು ಆಚರಿಸಲಾಗುವುದು. ದೇವಸ್ಥಾನದಲ್ಲಿ ದೀಪಲಂಕಾರ ಸೇರಿದಂತೆ ಪ್ರಧಾನ ಅರ್ಚಕರಾದ ಅರವಿಂದ್ ಭಟ್ ಅವರ ನೇತೃತ್ವದಲ್ಲಿ ಪೂಜಾ ಧಾರ್ಮಿಕ ಕಾರ್ಯಗಳು ನಡೆಯಲಿವೆ.
ಪರಿವಾರ ದೇವರುಗಳಾದ ನಾಗದೇವತೆ, ಕಾಲಭೈರವ, ಪರಶುರಾಮ, ಮಾತಂಗಿ, ತ್ರಿಶೂಲ ಭೈರಪ್ಪ ದೇವರುಗಳಿಗೆ ವಿಶೇಷ ಪೂಜೆ ಮಹಾಮಂಗಳಾರತಿ ನಡೆಯಲಿದೆ.
ಸಂಜೆ 7ರಿಂದ ಶಿವರುದ್ರಪ್ಪ ಜೋಗಿ ಅವರಿಂದ ಜೋಗಿ ಪದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ » ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನವೆಂಬರ್ 21ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಲಿಸ್ಟ್
LATEST NEWS
- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

About The Editor
ನಿತಿನ್ ಆರ್.ಕೈದೊಟ್ಲು
















