ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮೃತ ವ್ಯಕ್ತಿಯನ್ನು ಹೊಸನಗರದ ವಿಕಲ ಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗುತ್ತಿಗೆ ನೌಕರರ ಶ್ರೀಕಾಂತ್ (42) ಎಂದು ಗುರುತಿಸಲಾಗಿದೆ. ನೆಹರು ಕ್ರೀಡಾಂಗಣದಲ್ಲಿ ಇವತ್ತು ಜಿಲ್ಲಾ ಮಟ್ಟದ ವಿಕಲ ಚೇತನರ ಕ್ರೀಡಾಕೂಟ ನಡೆಯುತಿತ್ತು. ಆದರೆ ಶ್ರೀಕಾಂತ್ ಯಾವುದೇ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿದು ಬಂದಿದೆ.
ಪೆವಿಲಿಯನ್ ಮೇಲೆ ಶ್ರೀಕಾಂತ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರಿಂದ ಜಯನಗರ ಠಾಣೆಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಪರಿಶೀಲಿಸಿದಾಗ ಶ್ರೀಕಾಂತ್ ಮೃತಪಟ್ಟಿರುವುದು ಗೊತ್ತಾಗಿದೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಕ್ರೀಡಾ ಇಲಾಖೆ ಅಧಿಕಾರಿ ಹೇಳಿದ್ದೇನು?
ಇನ್ನು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ್, ವಿಕಲ ಚೇತನರ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯುತ್ತಿತ್ತು. ಅವರು ಯಾವುದೇ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ ಎಂದು ಹೇಳಿದ್ದಾರೆ. ಜಯನಗರ ಠಾಣೆ ಪೊಲೀಸರು ಬಂದು ಪರಿಶೀಲಿಸುತ್ತಿದ್ದಾರೆ. ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಇದನ್ನೂ ಓದಿ » ಶೀಟ್ ಮೇಲಿತ್ತು ಪ್ರತಿಷ್ಠಿತ ಕಂಪನಿಯ ಹೆಸರು, ಪೊಲೀಸ್ ದಾಳಿ ಬಳಿಕ ಹೊರಬಿತ್ತು ಅಸಲಿ ವಿಷಯ

