ಶಿವಮೊಗ್ಗ ಲೈವ್
ಹೊಸನಗರ: ತಾಲೂಕು ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ ಮತ್ತಿಮನೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ಅಗಲಿಕೆಯ ವಿಚಾರ ತಿಳಿದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಬಿಜೆಪಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಇಂದು ಮಧ್ಯಾಹ್ನ ಸುಬ್ರಹ್ಮಣ್ಯ ಅವರು ತಮ್ಮ ಮನೆಯಲ್ಲಿ ಅಸ್ವಸ್ಥರಾಗಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸುಬ್ರಹ್ಮಣ್ಯ ಮತ್ತಿಮನೆ ಅವರು ಈ ಹಿಂದೆ ತಾಲೂಕು ಪಂಚಾಯಿತಿ ಸದಸ್ಯರಾಗಿಯು ಸೇವೆ ಸಲ್ಲಿಸಿದ್ದರು.
ಬಿಜೆಪಿ ಪ್ರಮುಖರ ಸಂತಾಪ
ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಮತ್ತಿಮನೆ ನಿಧನಕ್ಕೆ ಸಂಸದ ರಾಘವೇಂದ್ರ ಸೇರಿದಂತೆ ಬಿಜೆಪಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ » ಟ್ರಾಫಿಕ್ ಫೈನ್ ಬಾಕಿ ಇದ್ಯಾ? ಮತ್ತೆ ಆಫರ್ ನೀಡಿದ ಸರ್ಕಾರ
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
