ಮಾಜಿ ಸೈನಿಕರ ನೇಮಕಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಗೆ ಹೊರಗುತ್ತಿಗೆ ಆಧಾರದಲ್ಲಿ ಒಬ್ಬರು ಮಾಜಿ ಸೈನಿಕರನ್ನು ಲಿಪಿಕ ಸಿಬ್ಬಂದಿಯನ್ನಾಗಿ ಲಿಖಿತ ಪರೀಕ್ಷೆಯ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

60 ವರ್ಷ ಮೀರದ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಸರ್ಕಾರದ ಕಾಯಂ ಹುದ್ದೆಗೆ ಸಮನಾಗಿರುವುದಿಲ್ಲ. ಸೇವಾ ಕಾಯಮಾತಿಗೂ ಅವಕಾಶವಿರುವುದಿಲ್ಲ.  

ಆಸಕ್ತರು ಡಿ.5ರ ಸಂಜೆ 5 ಗಂಟೆಯೊಳಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಸ್ವ–ವಿವರಗಳೊಂದಿಗೆ, ಸ್ವ ಹಸ್ತಾಕ್ಷರದಲ್ಲಿ ಅರ್ಜಿಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08182–220925ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಸಿ.ಎ.ಹಿರೇಮಠ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ ರೂಮಿನಲ್ಲಿ ಬೆಂಕಿ ಕೇಸ್‌, ಪುರುಷ, ಮಹಿಳೆ ವಿರುದ್ಧವೇ ಕೇಸ್‌, ಏನೇನಿದೆ ದೂರಿನಲ್ಲಿ?

SHIMOGA-NEWS-UPDATE

Leave a Comment