ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಜಾನಪದ ಪರಿಷತ್ ನೇತೃತ್ವದಲ್ಲಿ ಒಂದು ವಾರ ರಾಜ್ಯೋತ್ಸವ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್‌ನ ಜಿಲ್ಲಾ ಅಧ್ಯಕ್ಷ ಡಿ.ಮಂಜುನಾಥ ಹೇಳಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಮಂಜುನಾಥ್, ನ. 24ರಂದು ಶಿವಮೊಗ್ಗ ಸಾಹಿತ್ಯ ಗ್ರಾಮದಲ್ಲಿ ಸಪ್ತಾಹ ಕಾರ್ಯಕ್ರಮ ಆರಂಭವಾಗಲಿದೆ. ನ.25ರಂದು ಭದ್ರಾವತಿಯಲ್ಲಿ, 26ರಂದು ತೀರ್ಥಹಳ್ಳಿಯಲ್ಲಿ, 27ರಂದು ಸೊರಬ, 28ರಂದು ಶಿಕಾರಿಪುರ, 29ರಂದು ಹೊಸನಗರ, 30ರಂದು ಸಾಗರದ ನೆಹರೂ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ರಾಷ್ಟ್ರಕವಿ ಕುವೆಂಪು ಅವರು ನಾಡಗೀತೆ ರಚಿಸಿ ನೂರು ವರ್ಷ ಕಳೆದಿದೆ. ರಾಜ್ಯೋತ್ಸವ ಸಂದರ್ಭದಲ್ಲಿ ನೂರು ಕಂಠಗಳು ಒಮ್ಮೆಲೆ ನಾಡಗೀತೆ ಹಾಡುವಂತೆ ಸಿದ್ಧತೆ ಮಾಡಿದ್ದೇವೆ. ಜಾನಪದ ಪರಿಷತ್ತಿನ ನೇತೃತ್ವದಲ್ಲಿ ಜನಪದ ಹಾಡು, ನೃತ್ಯ ಕಾರ್ಯಕ್ರಮ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಸಪ್ತಾಹಕ್ಕೆ ಶಿವಮೊಗ್ಗದಲ್ಲಿ ಚಾಲನೆ
ಸಾಹಿತ್ಯ ಗ್ರಾಮದಲ್ಲಿ ನ. 24ರಂದು ಸಂಜೆ 6ಕ್ಕೆ ರಾಜ್ಯೋತ್ಸವ ಸಪ್ತಾಹಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಅಭಿಷೇಕ್ ಚಾಲನೆ ನೀಡಲಿದ್ದಾರೆ. ಡಿ. ಮಂಜುನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ.ರಾಜೇಂದ್ರ ಚನ್ನಿ, ಮಾಜಿ ಶಾಸಕ ಕೋಣಂದೂರು ಲಿಂಗಪ್ಪ, ರಂಗಕರ್ಮಿ ಸಾಸ್ವೆಹಳ್ಳಿ ಸತೀಶ್ ಅವರನ್ನು ಅಭಿನಂದಿಸಲಾಗುವುದು ಎಂದರು.
ಎಂ.ಎಂ. ಸ್ವಾಮಿ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಭದ್ರಾವತಿ ಘಟಕದ ಅಧ್ಯಕ್ಷೆ ಸುಧಾಮಣಿ ವೆಂಕಟೇಶ, ಗಾಯಕಿ ಲಕ್ಷ್ಮೀಮಹೇಶ್, ಕೆ.ಎಸ್.ಮಂಜಪ್ಪ, ಎಂ. ನವೀನ್ ಕುಮಾರ್, ಕೃಷ್ಣಮೂರ್ತಿ ಹಿಳ್ಳೋಡಿ, ಭಾರತಿ ರಾಮಕೃಷ್ಣ, ಶಶಿಕಲಾ ಉಪಸ್ಥಿತರಿದ್ದರು.
ಇದನ್ನೂ ಓದಿ » ಶಿವಮೊಗ್ಗದ ಹಲವೆಡೆ ನ.24ರಂದು ಇಡೀ ದಿನ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಲಿಸ್ಟ್
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















