ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್‌, ಉಚಿತವಾಗಿ CCTV ಅಳವಡಿಕೆ, ಸರ್ವಿಸಿಂಗ್‌ ಶಿಬಿರ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿ.15 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ CCTV ಅಳವಡಿಕೆ ಮತ್ತು ಸರ್ವಿಸಿಂಗ್ ಉಚಿತ ತರಬೇತಿ ಶಿಬಿರ ಏರ್ಪಡಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಶಿಬಿರಾರ್ಥಿಗಳು ಡಿ.4ರ ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನ ನಡೆಯಲಿದೆ.  ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿ ಜೊತೆಗೆ ಹಾಜರಾಗಬೇಕಾಗಿ.

ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಡಿ.4 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 9686248369, 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಹಂಪ್‌ಗಳ ಅವಾಂತರ, ಸಿಟ್ಟಾದ ಜನ, ಅಷ್ಟಕ್ಕು ಸಮಸ್ಯೆ ಏನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment