ಶಿವಮೊಗ್ಗ: ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡ 50ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
1990-91 ರಿಂದ 2019-20 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಓ) ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಈ ಅವಧಿಯಲ್ಲಿ 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದೆ. ಸಂಬಂಧಪಟ್ಟ ವಾಹನ ಮಾಲೀಕರು ಡಿ.12 ರೊಳಗೆ ರಿಯಾಯಿತಿ ಬಳಸಿಕೊಂಡು ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿ ಕೊಳ್ಳಬಹುದಾಗಿದೆ ಎಂದು ಆರ್.ಟಿ.ಓ ಮುರಗೇಂದ್ರ.ಬಿ.ಶಿರೋಲ್ಕರ್ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಹಂಪ್ಗಳ ಅವಾಂತರ, ಸಿಟ್ಟಾದ ಜನ, ಅಷ್ಟಕ್ಕು ಸಮಸ್ಯೆ ಏನು?
ಇದನ್ನೂ ಓದಿ:➤ ‘ಅನ್ನ ವಿಷವಾಗುತ್ತಿದೆʼ, ಸಂಸದ ರಾಘವೇಂದ್ರ ಆತಂಕ, ಬೆಳೆಗೆ ಉತ್ತಮ ಬೆಲೆ ಕುರಿತು ರೈತರಿಗೆ ಸಲಹೆ, ಏನದು?
