BREAKING NEWS – ಶಿವಮೊಗ್ಗದಲ್ಲಿ ಆಪ್ತ ಸಹಾಯಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗ ನಗರದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್‌) ಡೀನ್‌ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಎಂಬುವವರಿಗೆ ಸಂಬಂಧಿಸಿದ ನಾಲ್ಕು ಕಡೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಸಿಮ್ಸ್‌ ಕಾಲೇಜಿನ ಡೀನ್‌ ಡಾ. ವಿರುಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಅವರಿಗೆ ಸೇರಿದ ಮನೆಗಳ ಮೇಲೆ ದಾಳಿಯಾಗಿದೆ. ಮೆಡಿಕಲ್‌ ಕಾಲೇಜು ಕ್ವಾರ್ಟರ್ಸ್‌, ಜೆ.ಹೆಚ್.ಪಟೇಲ್‌ ಬಡಾವಣೆಯಲ್ಲಿರುವ ಮನೆ, ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿರುವ ಮನೆ ಸೇರಿ ಒಟ್ಟು ನಾಲ್ಕುಕಡೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ.

ಆದಾಯಕ್ಕು ಮೀರಿ ಆಸ್ತಿ ಗಳಿಗೆ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳ ನಾಲ್ಕು ತಂಡ ಏಕಕಾಲಕ್ಕೆ ವಿವಿಧೆಡೆ ದಾಳಿ ನಡೆಸಿದೆ. ಲೋಕಾಯುಕ್ತ ಎಸ್‌.ಪಿ ನೇತೃತ್ವದಲ್ಲಿ ದಾಳಿಯಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

ಇದನ್ನೂ ಓದಿ » ಬಾಕಿ ಇರುವ 790 ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ, ಯಾವ್ಯಾವ ಕೇಸ್‌?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment