ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆದಾಯಕ್ಕಿಂತಲು ಹೆಚ್ಚಿಗೆ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಶಿವಮೊಗ್ಗ ಮೆಡಿಕಲ್ ಕಾಲೇಜು ಎಫ್.ಡಿ.ಎ ಲಕ್ಷ್ಮೀಪತಿ.ಸಿ.ಎನ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಐದು ಕಡೆ ದಾಳಿ ನಡೆಸಿ ಒಟ್ಟು ₹2.49 ಕೋಟಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.
ಲಕ್ಷ್ಮೀಪತಿ ಬಳಿ 3 ಮನೆಗಳು, 3 ಎಕರೆ 20 ಗುಂಟೆ ಕೃಷಿ ಜಮೀನು ಪತ್ತೆಯಾಗಿದೆ. ಇವುಗಳ ಮೌಲ್ಯ ₹1,63,80,000 ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇನ್ನು ದಾಳಿ ಸಂದರ್ಭ ₹12,01,720 ನಗದು, ₹ 23,29,880 ಮೌಲ್ಯದ ಆಭರಣ, ₹ 23.04 ಲಕ್ಷ ಮೌಲ್ಯದ ವಾಹನಗಳು, ₹27,47,881 ಮೌಲ್ಯದ ಗೃಯೋಪಯೋಗಿ ವಸ್ತುಗಳು ಪತ್ತೆಯಾಗಿವೆ.
ಒಟ್ಟು ₹2,49,63,481 ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಲೋಕಾಯುಕ್ತ ಅಧಿಕಾರಿಗಳು ಇವತ್ತು ರಾಜ್ಯಾದ್ಯಂತ 10 ಅಧಿಕಾರಿಗಳಿಗೆ ಸಂಬಂಧಿಸಿದ 47 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಒಟ್ಟು ₹35,31,77,227 ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಲಾರಿ ಚಕ್ರದಡಿ ಸಿಲುಕಿದ ಬೈಕ್, ಇಬ್ಬರು ಸವಾರರು ಸ್ಥಳದಲ್ಲೆ ಸಾವು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





