ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳಿಗೆ ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿ.20 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಯನ್ನು https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಸಲ್ಲಿಸಬೇಕು. https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಕಾರ್ಯಕ್ರಮದ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಮಾಹಿತಿ ಪಡೆಯಬಹುದು.
ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್ ನಿರಂತರ ವರದಿ ಬಳಿಕ ರಸ್ತೆ ಗುಂಡಿಗಳು ಬಂದ್
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770005 ಹಾಗೂ bcwdhelpline@gmail.com ಗೆ ಸಂಪರ್ಕಿಸಬಹುದು, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶಕ್ಕಾಗಿ ಸಹಾಯವಾಣಿ ಸಂಖ್ಯೆ: 1902 ಹಾಗೂ postmatrichelp@karnataka.gov.in ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

About The Editor
ನಿತಿನ್ ಆರ್.ಕೈದೊಟ್ಲು





