ಭದ್ರಾವತಿ – ಶಿವಮೊಗ್ಗ ರಸ್ತೆಯಲ್ಲಿ ರಾತ್ರಿ ಕಾರು ಅಡ್ಡಗಟ್ಟಿ ದಾಳಿ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಭದ್ರಾವತಿಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುತ್ತಿದ್ದ ಧನುಷ್ ಎಂ. ಜಾಧವ್ ಎಂಬುವರ ಕಾರನ್ನು ಮತ್ತೊಂದು ಕಾರು ಓವರ್‌ಟೇಕ್ (Overtake) ಮಾಡಿ ಅಡ್ಡಗಟ್ಟಿ, ಅದರಲ್ಲಿದ್ದ ಇಬ್ಬರು ಅಪರಿಚಿತರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ನವೆಂಬರ್ 25ರ ರಾತ್ರಿ ಘಟನೆ ನಡೆದಿದೆ. ಭದ್ರಾವತಿಯಲ್ಲಿ (Bhadravathi) ಸ್ನೇಹಿತನ ಮದುವೆ ಕಾರ್ಯಕ್ರಮ ಮುಗಿಸಿ ಧನುಷ್ ಜಾಧವ್ ಶಿವಮೊಗ್ಗಕ್ಕೆ ಬರುತ್ತಿದ್ದರು. ಬಿದಿರೆ ಜಯಲಕ್ಷ್ಮಿ ಫೂಯೆಲ್ಸ್ (Jayalaxmi Fuels) ಬಳಿ ಹೆದ್ದಾರಿಯಲ್ಲಿ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಕಾರು ಓವರ್‌ಟೇಕ್ ಮಾಡಿ ಅಡ್ಡಗಟ್ಟಿದೆ ಎಂದು ಆರೋಪಿಸಲಾಗಿದೆ.

Shimoga-Bhadravathi-Road-Old-Photo.webp

ಇದನ್ನೂ ಓದಿ » ಭದ್ರಾ ಜಲಾಶಯದ ಬಳಿ ಪ್ರವಾಸಿಗರ ವಾಹನ ಬೆನ್ನಟ್ಟಿದ ಕಾಡಾನೆ, ಆಗಿದ್ದೇನು?

ಕಾರಿನಲ್ಲಿದ್ದ ಇಬ್ಬರು ಅಪರಿಚಿತರು ಧನುಷ್‌ಗೆ ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಒಡ್ಡಿದ್ದಾರೆ. ಅಲ್ಲದೆ ಮುಖಕ್ಕೆ ಗುದ್ದಿ, ತುಟಿ, ಮೈ ಕೈ ಮತ್ತು ಹೊಟ್ಟೆಗೆ ಹೊಡೆದಿದ್ದಾರೆ. ಧನುಷ್‌ ಅವರ ಮೊಬೈಲ್‌ಗು ಹಾನಿಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment